Connect with us

ದಿನದ ಸುದ್ದಿ

ದಾವಣಗೆರೆ | ಸ್ಮಾರ್ಟ್‍ಸಿಟಿ ವತಿಯಿಂದ ಪ್ರೌಢಶಾಲಾ ವಿದ್ವಿದ್ವತ್ತಿನಳಿಗೆ ವಿದ್ವತ್ ಲರ್ನಿಂಗ್ ಆ್ಯಪ್ ಮೂಲಕ ಉಚಿತ ಶಿಕ್ಷಣ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮೈಸೂರಿನ ವಿದ್ವತ್ ಇನ್ನೋವೇಟಿವ್ ಸಲ್ಯೂಷನ್ಸ್ ಪ್ರೈಲಿ. ಇವರ ಪ್ರಾಯೋಜಕತ್ವದಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳ ಪರೀಕ್ಷಾ ಹಿತದೃಷ್ಟಿಯಿಂದ 08, 09 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ 02 ತಿಂಗಳುಗಳ ಕಾಲ ವಿದ್ವತ್ ಲರ್ನಿಂಗ್ ಆ್ಯಪ್‍ನ ಉಚಿತ ಸಬ್‍ಸ್ಕ್ರಿಪ್ಷನ್ ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದ್ದು, ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ಈ ಆ್ಯಪ್ ಅನ್ನು ಮೊಬೈಲ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಇದರ ಅನುಕೂಲ ಪಡೆದುಕೊಳ್ಳಬೇಕು ಎಂದು ಸ್ಮಾರ್ಟ್‍ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಅವರು ತಿಳಿಸಿದ್ದಾರೆ.

ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಲರ್ನಿಂಗ್ ಆ್ಯಪ್ ಉಚಿತವಾಗಿ ಒದಗಿಸುವ ಕುರಿತಂತೆ ಜಿಲ್ಲಾಡಳಿತ ಭವನ ಆವರಣದಲ್ಲಿರುವ ಸ್ಮಾಟ್‍ಸಿಟಿ ಯೋಜನಾ ಕಚೇರಿಯಲ್ಲಿ ಬುಧವಾರ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು.

ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಕಾರಣದಿಂದಾಗಿ ಕಳೆದೆರಡು ವರ್ಷಗಳಲ್ಲಿ ಮಕ್ಕಳು ಶಾಲೆಗಳಿಗೆ ಭೌತಿಕವಾಗಿ ಹಾಜರಾಗದೆ, ಕಲಿಕೆಯಲ್ಲಿ ಹಿಂದುಳಿಯುವಂತಾಗಿದೆ. ಆನ್‍ಲೈನ್ ತರಗತಿಗಳನ್ನು ಅನಿವಾರ್ಯವಾಗಿ ಕೈಗೊಳ್ಳಲಾಗಿತ್ತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಮೈಸೂರಿನ ವಿದ್ವತ್ ಇನೋವೇಟಿವ್ ಸಲ್ಯೂಷನ್ಸ್ ಪ್ರೈ.ಲಿ. ಕಂಪನಿಯು ದಾವಣಗೆರೆಯಲ್ಲಿ 05 ರಿಂದ 10 ನೇ ತರಗತಿ ಮತ್ತು ಕಾಲೇಜುಗಳಲ್ಲಿ ಪದವಿಪೂರ್ವ ಹಾಗೂ ಪದವಿ ಕಾಲೇಜುವರೆಗಿನ ವಿದ್ಯಾರ್ಥಿಗಳಿಗೆ ಎಲ್ಲ ವಿಷಯಗಳ ಪಠ್ಯಗಳನ್ನು ಒಳಗೊಂಡಂತೆ ಸ್ಮಾರ್ಟ್‍ಕ್ಲಾಸ್‍ಗಳಿಗೆ ಕಂಟೆಂಟ್‍ಗಳನ್ನು ಒದಗಿಸಿಕೊಟ್ಟಿದೆ.

ಕಳೆದ ವರ್ಷ ಸುಮಾರು 6900 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು, ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಲು ಸಾಧ್ಯವಾಗಿದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಪ್ರಯತ್ನದ ಕಾರಣದಿಂದ ಪ್ರಸಕ್ತ ವರ್ಷವೂ ಕೂಡ ವಿದ್ವತ್ ಇನೋವೇಟಿವ್ ಸಲ್ಯೂಷನ್ಸ್ ಪ್ರೈ.ಲಿ. ಕಂಪನಿಯು ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳ ಪರೀಕ್ಷಾ ಹಿತದೃಷ್ಟಿಯಿಂದ 08, 09 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ 02 ತಿಂಗಳುಗಳ ಕಾಲ ವಿದ್ವತ್ ಲರ್ನಿಂಗ್ ಆ್ಯಪ್‍ನ ಉಚಿತ ಸಬ್‍ಸ್ಕ್ರಿಪ್ಷನ್ ಪಡೆದುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದು, ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಆ್ಯಪ್ ಅನ್ನು ಮೊಬೈಲ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಇದರ ಅನುಕೂಲ ಪಡೆದುಕೊಳ್ಳಬೇಕು.

ದಾವಣಗೆರೆ ಸ್ಮಾರ್ಟ್‍ಸಿಟಿ ಯೋಜನೆಯಡಿ ನಗರದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ತರಗತಿಗಳನ್ನು ಮೂರು ಹಂತಗಳಲ್ಲಿ ಹಾಗೂ ಕಾಲೇಜಿನಲ್ಲಿ ಮೊದಲ ಹಂತದ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಶಾಲೆಗಳಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ 03 ಕೋಟಿ ರೂ. ವೆಚ್ಚದಲ್ಲಿ 19 ಶಾಲೆಗಳಲ್ಲಿ 62 ಸ್ಮಾರ್ಟ್ ತರಗತಿಗಳು ಮತ್ತು 19 ಸ್ಮಾರ್ಟ್ ಲ್ಯಾಬ್‍ಗಳು.

ಎರಡನೆ ಹಂತದಲ್ಲಿ 1.70 ಕೋಟಿ ರೂ. ವೆಚ್ಚದಲ್ಲಿ 10 ಶಾಲೆಗಳ 40 ತರಗತಿಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು 01 ಸರ್ಕಾರಿ ಐಟಿಐ ಕಾಲೇಜು ಸೇರಿದಂತೆ ಒಟ್ಟು 11 ಸ್ಮಾರ್ಟ್ ಲ್ಯಾಬ್‍ಗಳು. ಮೂರನೆ ಹಂತದಲ್ಲಿ 31 ಶಾಲೆಗಳ 56 ತರಗತಿಗಳಲ್ಲಿ ಸ್ಮಾರ್ಟ್ ಕ್ಲಾಸ್ ನಿರ್ಮಿಸಿದ್ದು, 31 ಕಂಪ್ಯೂಟರ್ ಲ್ಯಾಬ್ ನಿರ್ಮಿಸಲಾಗಿದೆ. 09 ಕಾಲೇಜುಗಳಲ್ಲಿ 36 ಸಾರ್ಟ್ ತರಗತಿ, 18 ಕಂಪ್ಯೂಟರ್ ಲ್ಯಾಬ್ ನಿರ್ಮಿಸಲಾಗಿದೆ.

ಮೈಸೂರಿನ ವಿದ್ವತ್ ಇನೋವೇಟಿವ್ ಸಲ್ಯೂಷನ್ಸ್ ಪ್ರೈ.ಲಿ. ಇವರು ಎರಡನೆ ಮತ್ತು ಮೂರನೆ ಹಂತದ ಕಾಮಗಾರಿಗಳ ಗುತ್ತಿಗೆದಾರರಾಗಿದ್ದು, ಈ ಕಾಮಗಾರಿಗಳು ಲೋಕಾರ್ಪಣೆಗೊಂಡು ನಗರದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿವೆ ಎಂದರು.

ಮೈಸೂರಿನ ವಿದ್ವತ್ ಇನೋವೇಟಿವ್ ಸಲ್ಯೂಷನ್ಸ್ ಪ್ರೈ.ಲಿ. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ರೋಹಿತ್ ಎಂ. ಪಾಟೀಲ್ ಅವರು ಮಾತನಾಡಿ, ತಮ್ಮ ಕಂಪನಿಯು ತನ್ನ ಸಿಎಸ್‍ಆರ್ ನಿಧಿಯಡಿ, ದಾವಣಗೆರೆ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ನೆರವು ನೀಡುವ ಉದ್ದೇಶದಿಂದ ವಿದ್ವತ್ ಎಜುಕೇಷನಲ್ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಶಿಕ್ಷಣ ಒದಗಿಸಲು ಮುಂದಾಗಿದೆ.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಡಿಜಿಟಲ್ ಶಿಕ್ಷಣ ಒದಗಿಸುವುದು ತನ್ನ ಮುಖ್ಯ ಧ್ಯೇಯವಾಗಿದ್ದು, ಈ ಆ್ಯಪ್ ಬಳಸಿ ವ್ಯಾಸಂಗ ಮಾಡಿರುವ ಅನೇಕ ವಿದ್ಯಾರ್ಥಿಗಳು ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625 ಕ್ಕೆ 600 ಕ್ಕಿಂತ ಹೆಚ್ಚಿನ ಅಂಕ ಗಳಿಸಿ ಪಾಸಾಗಿದ್ದಾರೆ. ಕಳೆದ ವರ್ಷ ದಾವಣಗೆರೆ ಜಿಲ್ಲೆಯ 6900 ಕ್ಕೂ ವಿದ್ಯಾರ್ಥಿಗಳು ಆ್ಯಪ್ ಬಳಸಿದ್ದು, ಇದರಲ್ಲಿ ಹಲವಾರು ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.

ದಾವಣಗೆರೆಯಲ್ಲಿ ಸ್ಮಾರ್ಟ್ ಕ್ಲಾಸ್‍ಗಳ ಮೂಲಕ ತರಗತಿವಾರು ವಿಷಯ ಪಠ್ಯಗಳಿಗೆ ಎಲ್ಲ ರೀತಿಯ ಪರಿಕಲ್ಪನೆಗಳನ್ನು ದೃಶ್ಯ ಮಾಧ್ಯಮ ಹಾಗೂ ಅನಿಮೇಷನ್‍ಗಳ ಮೂಲಕ ವಿವರಿಸಲಾಗಿದೆ. ಇದರ ಜೊತೆಗೆ ಪಠ್ಯ ಪುಸ್ತಕದ ಅಭ್ಯಾಸ ಪ್ರಶ್ನೋತ್ತರಗಳನ್ನು ನೀಡಿದ್ದು, ಕಲೆಕೆಗೆ ಸಹಾಯವಾಗುವಂತೆ ಪ್ರಶ್ನೆಕೋಠಿ, ಅಭ್ಯಾಸ ಪುಸ್ತಕಗಳು, ಪರಿಕಲ್ಪನಾ ನಕ್ಷೆ, ಪಾಠ ಯೋಜನೆ, ಮಾದರಿ ಪ್ರಶ್ನೆಪತ್ರಿಕೆಗಳನ್ನೂ ಸಹ ನೀಡಲಾಗಿದ್ದು, ಈ ಕಲಿಕಾ ಸೌಲಭ್ಯವು ಕೇವಲ ಸ್ಮಾರ್ಟ್ ಶಾಲೆಗಳಿಗೆ ಮಾತ್ರ ಸೀಮಿತವಾಗಿರದೆ, ವಿದ್ವತ್ ಲರ್ನಿಂಗ್ ಆ್ಯಪ್‍ನಲ್ಲಿ ಕೂಡ ನೀಡಲಾಗಿದೆ.

ವಿದ್ವತ್ ಆ್ಯಪ್‍ನಲ್ಲಿ 8 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲೀಷ್, ಉರ್ದು ಮಾಧ್ಯಮದಲ್ಲಿ ಪಠ್ಯಗಳು ಸಿಬಿಎಸ್‍ಸಿ ಹಾಗೂ ಸ್ಟೇಟ್ ಸಿಲಬಸ್‍ನವರಿಗೂ ಲಭ್ಯವಿದೆ. ಈ ಪರಿಕಲ್ಪಾಧಾರಿತ ಕಲಿಕೆಯು ಮಗುವಿನ ಬೌದ್ಧಿಕ ಸಾಮಥ್ರ್ಯ ಹೆಚ್ಚಿಸುವುದಲ್ಲದೆ, ಕಲಿಕೆಯ ಆಸಕ್ತಿ ಉಂಟುಮಾಉವುದರಲ್ಲಿ ಸಹಾಯಕವಾಗಿದೆ.

ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಸಂವಾದನಾತ್ಮಕ ಕಲಿಕಾ ಮನೋಭಾವ ಹೆಚ್ಚಿಸಿ, ತಮ್ಮನ್ನು ತಾವು ಕಲಿಕೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವಂತೆ ರೇರೇಪಿಸುತತದೆ. ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯಬೇಕಾದ ಎಲ್ಲ ಬಗೆಯ ಪಠ್ಯ ವಿಷಯಗಳನ್ನು ವಿದ್ವತ್ ಆ್ಯಪ್ ಮೂಲಕವೇ ಮನೆಯಲ್ಲಿಯೇ ಸುರಕ್ಷಿತವಾಗಿ ಅಭ್ಯಾಸಿಸಬಹುದಾಗಿದೆ ಎಂದರು.

ವಿದ್ವತ್ ಲರ್ನಿಂಗ್ ಆ್ಯಪ್ ಅನ್ನು ಗೂಗಲ್ ಪ್ಲೇಸ್ಟೋರ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಇದರ ವೆಬ್‍ಲಿಂಕ್ ಮೊಬೈಲ್‍ಗಾಗಿ https://play.google.com/store/apps/details?id=com.visl ನಿಂದ ಪಡೆಯಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending