ದಿನದ ಸುದ್ದಿ
ದಾವಣಗೆರೆಯ ಅಶೋಕ ಟಾಕೀಸ್ ಬಳಿಯ ರೈಲ್ವೆ ಗೇಟ್ ಸಮಸ್ಯೆಗೆ ಪರಿಹಾರ : ಕಾಮಗಾರಿಗೆ ಶೀಘ್ರ ಚಾಲನೆ : ಸಂಸದ ಜಿ.ಎಂ ಸಿದ್ದೇಶ್ವರ್
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/02/suddidina_railwaygate_davangere.jpg&description=ದಾವಣಗೆರೆಯ ಅಶೋಕ ಟಾಕೀಸ್ ಬಳಿಯ ರೈಲ್ವೆ ಗೇಟ್ ಸಮಸ್ಯೆಗೆ ಪರಿಹಾರ : ಕಾಮಗಾರಿಗೆ ಶೀಘ್ರ ಚಾಲನೆ : ಸಂಸದ ಜಿ.ಎಂ ಸಿದ್ದೇಶ್ವರ್', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/02/suddidina_railwaygate_davangere.jpg&description=ದಾವಣಗೆರೆಯ ಅಶೋಕ ಟಾಕೀಸ್ ಬಳಿಯ ರೈಲ್ವೆ ಗೇಟ್ ಸಮಸ್ಯೆಗೆ ಪರಿಹಾರ : ಕಾಮಗಾರಿಗೆ ಶೀಘ್ರ ಚಾಲನೆ : ಸಂಸದ ಜಿ.ಎಂ ಸಿದ್ದೇಶ್ವರ್', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ಬಹು ವರ್ಷಗಳಿಂದ ಸಮಸ್ಯೆಯಾಗಿ ಉಳಿದಿದ್ದ ದಾವಣಗೆರೆ ನಗರದ ಅಶೋಕ ಟಾಕೀಸ್ ಬಳಿಯ ರೈಲ್ವೆ ಗೇಟ್ ತೊಂದರೆಗೆ ಇದೀಗ ಪರಿಹಾರ ಕಂಡುಕೊಳ್ಳಲಾಗಿದ್ದು, ರೈಲ್ವೆ ಕೆಳಸೇತುವೆ ನಿರ್ಮಾಣ ಹಾಗೂ ರಸ್ತೆಯನ್ನು 60 ಅಡಿ ರಸ್ತೆಯಾಗಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಶೀಘ್ರ ಚಾಲನೆ ನೀಡಿ, ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.
ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಹಾಗೂ ರೈಲ್ವೆ ಯೋಜನೆಗೆ ಸಂಬಂಧಿತ ಕಾಮಗಾರಿಗಳ ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಅಧಿಕಾರಿಗಳೊಂದಿಗಿನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದಾವಣಗೆರೆ ನಗರದ ಪ್ರಮುಖ ಜನನಿಬಿಡ ರಸ್ತೆಯಾಗಿರುವ ಅಶೋಕ ಟಾಕೀಸ್ ಬಳಿಯ ರೈಲ್ವೆ ಗೇಟ್‍ಗೆ ಎರಡು ಕಿಂಡಿಯ ಕೆಳ ಸೇತುವೆ ನಿರ್ಮಾಣ ಹಾಗೂ ಇಲ್ಲಿಂದ ಈರುಳ್ಳಿ ಮಾರ್ಕೆಟ್‍ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 60 ಅಡಿ ರಸ್ತೆಯನ್ನಾಗಿ ಅಗಲೀಕರಣಗೊಳಿಸಲು 35 ಕೋಟಿ ರೂ. ಗಳ ಯೋಜನೆ ರೂಪಿಸಲಾಗಿದೆ. ರಸ್ತೆ ನಿರ್ಮಾಣಕ್ಕೆ ಒಟ್ಟುಯ 1.14 ಲಕ್ಷ ಚದುರಡಿ ಭೂವಿಸ್ತೀರ್ಣ ಬೇಕಾಗುವುದು.
ಇದನ್ನೂ ಓದಿ | ದಿಶಾ ರವಿಗೆ ಜಾಮೀನು ಮಂಜೂರು
ಇದಕ್ಕಾಗಿ ಅಗತ್ಯವಿರುವ ಭೂ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಈಗಾಗಲೆ ಸಂಬಂಧಪಟ್ಟ ಭೂ ಮಾಲೀಕರು ತಮ್ಮ ಒಪ್ಪಿಗೆ ಸೂಚಿಸಿದ್ದಾರೆ. ರಸ್ತೆ ಅಗಲೀಕರಣದಿಂದಾಗಿ ಭೂಮಿ ಕಳೆದುಕೊಳ್ಳುವ ಭೂ ಮಾಲೀಕರಿಗೆ ತಮ್ಮ ಉಳಿದ ಭೂಮಿಯ ಮೌಲ್ಯ ಸುಮಾರು ನಾಲ್ಕುಪಟ್ಟು ಹೆಚ್ಚಾಗಲಿದ್ದು, ಅವರಿಗೂ ನಿಯಮಾನುಸಾರ ಪರಿಹಾರ, ಕಟ್ಟಡಗಳಿದ್ದಲ್ಲಿ, ಅದಕ್ಕೂ ಮೌಲ್ಯಮಾಪನ ಮಾಡಿಸಿ, ಪರಿಹಾರ ಒದಗಿಸಲಾಗುವುದು.ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ, ಒಂದು ವರ್ಷದೊಳಗೆ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಸಂಸದರು ಹೇಳಿದರು.
ಚಿತ್ರದುರ್ಗ-ಹರಿಹರ ವರೆಗಿನ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿಯನ್ನು ಬರುವ ಅಕ್ಟೋಬರ್ ಒಳಗೆ ಪೂರ್ಣಗೊಳಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಈ ವ್ಯಾಪ್ತಿಯಲ್ಲಿ 03 ಕೆಳಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಪೂರ್ಣಗೊಳಿಸಲು ಇನ್ನೂ 15 ತಿಂಗಳುಗಳ ಕಾಲಾವಕಾಶವನ್ನು ಅಧಿಕಾರಿಗಳು ಕೋರಿದ್ದಾರೆ.
ದಾವಣಗೆರೆ ನಗರ ಪ್ರವೇಶಿಸುವ ರಾ.ಹೆ. ಮಾರ್ಗದಲ್ಲಿ ಚಿಂದೋಡಿ ಲೀಲಾ ರಂಗಮಂಟಪದ ಬಳಿ ರಸ್ತೆ ಕಿರಿದಾಗಿದ್ದು, ವಾಹನ ಸವಾರರಿಗೆ ಗೊಂದಲವಾಗುವಂತಿದೆ. ಈ ಪ್ರದೇಶದಲ್ಲಿ 03 ವಿಂಡೋ ರಸ್ತೆ ನಿರ್ಮಾಣ ಮಾಡಿ ರಾಷ್ಟ್ರೀಯ ಹೆದ್ದಾರಿಯಿಂದ ನೇರ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಉಳಿದಂತೆ ಬನಶಂಕರಿ ಲೇಔಟ್ ಬಳಿ ರಸ್ತೆ ಅಗಲೀಕರಣ, ಮಲ್ಲಶೆಟ್ಟಿಹಳ್ಳಿ, ಕಲ್ಪನಹಳ್ಳಿ ಬಳಿಯ ಹೈಟೆನ್ಷನ್ ವಿದ್ಯುತ್ ಮಾರ್ಗ ಸ್ಥಳಾಂತರ, ಹದಡಿ ರಸ್ತೆಯಲ್ಲಿ ವೃತ್ತ ನಿರ್ಮಾಣ, ಹಾಗೂ ಕುಂದುವಾಡ ಹತ್ತಿರ ಮೇಲ್ಸೇತುವೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮಾತನಾಡಿ, ದಾವಣಗೆರೆ ನಗರದ ಅಶೋಕ ಟಾಕೀಸ್ ರೈಲ್ವೆ ಗೇಟ್ ಬಳಿ 60 ಅಡಿ ರಸ್ತೆ ಅಗಲೀಕರಣಕ್ಕೆ ಅಗತ್ಯ ಭೂಮಿಯನ್ನು ಒದಗಿಸಲು ಭೂ ಮಾಲೀಕರು ಒಪ್ಪಿಗೆ ಸೂಚಿಸಿದ್ದು, ಭೂ ಮಾಲೀಕರಿಗೆ ಅನ್ಯಾಯವಾಗದಂತೆ ಅವರಿಗೆ ಪರಿಹಾರ ಒದಗಿಸಲಾಗುವುದು ಎಂದರು.
ದಾವಣಗೆರೆ ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ದೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ10 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

