Connect with us

ರಾಜಕೀಯ

ಬದಲಿ ನಾಯಕತ್ವಕ್ಕೆ ಅವಕಾಶ ಕೊಡೋಣ : ಸೋನಿಯಾ ಗಾಂಧಿ

Published

on

ಸುದ್ದಿದಿನ,ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಯದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಖಡಕ್ ನಿರ್ಧಾರ ಕೈಗೊಂಡಿದ್ದಾರೆ.

ವಿಪಕ್ಷ ನಾಯಕನ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಎರಡಕ್ಕೂ ರಾಜೀನಾಮೆ ಕೊಟ್ಟ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸೋಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮುಂದಾಗಿದ್ದಾರೆ. ಇದರ ಸುಳಿವು ಸಿಕ್ಕ ಸಿದ್ದರಾಮಯ್ಯ ಬಣ ರಾಹುಲ್ ಗಾಂಧಿ ಮೂಲಕ ಮನವೊಲಿಕೆ ಯತ್ನಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಸೋನಿಯಾ, ಪಕ್ಷಕ್ಕೆ ಯಾರೂ ಅನಿವಾರ್ಯ ಅಲ್ಲ. ಕಳೆದ 11 ವರ್ಷದಲ್ಲಿ ಸಿದ್ದರಾಮಯ್ಯರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಈಗ ಬದಲಾವಣೆಯ ಸಮಯ, ಬದಲಿ ನಾಯಕತ್ವಕ್ಕೆ ಅವಕಾಶ ಕೊಡೋಣ ಎಂದಿದ್ದಾರೆ.

ನಾನು ಮೊದಲ ಬಾರಿ ಎಐಸಿಸಿ ಅಧ್ಯಕ್ಷೆಯಾದಾಗ ದೇಶದಲ್ಲೆಡೆ ಪಕ್ಷದ ಪರಿಸ್ಥಿತಿ ಹೀಗೆ ಇತ್ತು. ಆದರೆ ನಾನು ಅನಿವಾರ್ಯವಾಗಿ ಬದಲಾವಣೆ ಮಾಡಲೇ ಬೇಕಾಯ್ತು. ಆನಂತರ ಪಕ್ಷ ಅಧಿಕಾರಕ್ಕೆ ಬಂತು. ಇಲ್ಲಿ ಯಾರೂ ಅನಿವಾರ್ಯ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಅಲ್ಲಿಗೆ ರಾಹುಲ್ ಗಾಂಧಿ ಮೂಲಕ ಸೋನಿಯ ಗಾಂಧಿಯವರ ಮನವೊಲಿಕೆ ಮಾಡಿ ಮತ್ತೆ ವಿಪಕ್ಷ ನಾಯಕನ ಸ್ಥಾನ ಹಾಗೂ ಸಿಎಲ್ ಪಿ ನಾಯಕನ ಸ್ಥಾನದಲ್ಲಿ ಮುಂದುವರಿಯುವ ಸಿದ್ದರಾಮಯ್ಯ ಆಸೆಗೆ ಸೋನಿಯಗಾಂಧಿ ತಣ್ಣೀರು ಎರಚಿದ್ದಾರೆ.

ಇತ್ತ ಹೈಕಮಾಂಡ್ ಹೇಳಿದರೆ ರಾಜೀನಾಮೆ ವಾಪಾಸ್ ಪಡೆಯುತ್ತೇನೆ ಎನ್ನುತ್ತಿದ್ದ ಸಿದ್ದರಾಮಯ್ಯ, ಪಕ್ಷಕ್ಕೆ ಯಾರೂ ಅನಿವಾರ್ಯ ಅಲ್ಲಾ ಅನ್ನೋ ಹೈಕಮಾಂಡ್ ನಿಲುವು ಕಂಡು ಸುಮ್ಮನಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್‍ಆರ್‍ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ

Published

on

ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು.

ಸೆ.22 ರಿಂದ ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಕ.ರಾ.ರ.ಸಾ.ನಿಗಮದ ವತಿಯಿಂದ ನಿರ್ಮಿತವಾಗಿರುವ ಪಿ.ಬಿ.ರಸ್ತೆಯ ಮರುನಿರ್ಮಿತ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ನೂತನ ಮಾರ್ಗಗಳ ಬಸ್ ನಿಲ್ದಾಣದಿಂದ ಸಂಸ್ಥೆಯ ವಾಹನಗಳ ಕಾರ್ಯಾಚರಣೆ ಆರಂಭವಾಗಲಿದೆ. ಸೆ.22 ರಿಂದ ಹೈಸ್ಕೂಲ್ ಬಸ್ ನಿಲ್ದಾಣದಿಂದ ಸಂಸ್ಥೆಯ ಎಲ್ಲಾ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್ ಹೆಬ್ಬಾರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆಮಂಡಳಿಯ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯು 1ಸಾವಿರದ 700 ವಿಶ್ವವಿದ್ಯಾಲಯಗಳು 45 ಸಾವಿರ ಕಾಲೇಜುಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಭಾರತವು ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವತ್ತ ಸಾಗುತ್ತಿದ್ದು, ಮುಂಬರುವ ದಿನಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತರಲು ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಪಾಲರು ಕರೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಶಕಗಳ ಬಳಿಕ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ; ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ನಿರೀಕ್ಷೆ

Published

on

ಸುದ್ದಿದಿನಡೆಸ್ಕ್:ದಶಕಗಳ ಬಳಿಕ ನಾಳೆ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಆಡಳಿತ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಪಟ್ಟಿಯನ್ನು ಸಿದ್ದಪಡಿಸಿ ಈಗಾಗಲೇ ಸರ್ಕಾರಕ್ಕೆ ನೀಡಿದ್ದಾರೆ.

ಕಳೆದ ಒಂದು ದಶಕದ ಹಿಂದೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕಲಬುರಗಿಯಲ್ಲಿ ಮೊದಲ ಬಾರಿಗೆ 1982ರಲ್ಲಿ ಆರ್.ಗುಂಡೂರಾವ್ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು.

ಆ ಬಳಿಕ 2008ರಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು. 2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು, ಇದೀಗ 2024ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡನೇ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending