ದಿನದ ಸುದ್ದಿ

ರಾಜ್ಯಾದ್ಯಂತ ನೈಋತ್ಯ ಮುಂಗಾರು ಚುರುಕು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ನೈಋತ್ಯ ಮುಂಗಾರು ಚುರುಕಾಗಿದೆ. ಕರಾವಳಿಯ ಬಹುತೇಕ ಭಾಗಗಳಲ್ಲಿ ಹಾಗು ಒಳನಾಡಿನಲ್ಲಿ ಭಾರೀ ಮಳೆಯಾಗಿದೆ.

ಮುನ್ಸೂಚನೆಯಂತೆ ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ವ್ಯಾಪಕವಾಗಿ, ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ತೀರದಲ್ಲಿ ಬಿರುಗಾಳಿ ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸುತ್ತಮುತ್ತ ಸಾಮಾನ್ಯ ಮೋಡಕವಿದ ವಾತಾವರಣ, ಒಂದೆರಡು ಕಡೆ ಹಗುರ ಮಳೆ ಬೀಳುವ ಸಂಭವ. ಗರಿಷ್ಠ 28, ಕನಿಷ್ಠ 20 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version