ದಿನದ ಸುದ್ದಿ

ಗಾಯಕ ಎಸ್ ಪಿ ಬಿ ಆರೋಗ್ಯ ಸ್ಥಿತಿ ಗಂಭೀರ

Published

on

ಸುದ್ದಿದಿನ, ಚೆನೈ : ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಸಹಾಯದಿಂದ ಉಸಿರಾಟ ನಡೆಸುತ್ತಿದ್ದಾರೆ ಎಂಬುದಾಗಿ ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ ಸಂಸ್ಥೆಯು ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿ ಮಾಹಿತಿ ನೀಡಿದೆ.

ಎಸ್ಪಿಬಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದ ಹಿನ್ನೆಲೆ ಅವರನ್ನು ಕಳೆದ ಆ.5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ತೀವ್ರ ನಿಗಾ ವಹಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version