ರಾಜಕೀಯ
ವಿಧಾನಸಭೆ | ಪ್ರಶ್ನೋತ್ತರ ಕಲಾಪ : “ನನ್ನ ತಲೆ ಮೇಲೆ ತಕ್ಕಡಿ ಇದೆ” ಎಂದ ಸ್ಪೀಕರ್ ರಮೇಶ್ ಕುಮಾರ್
ಸುದ್ದಿದಿನ,ಬೆಳಗಾವಿ : ನಾನು ಆಯ್ಕೆಯಾಗುವ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕರು ದೂರವಾಣಿ ಕರೆ ಮಾಡಿ ನನ್ನ ಮೇಲಿನ ಗೌರವಕ್ಕೆ ಅಭ್ಯರ್ಥಿ ಹಾಕುತ್ತಿಲ್ಲ ಎಂದು ಹೇಳಿದ್ದರು, ಹಾಗಾಗಿ ನನ್ನ ಮೇಲೆ ಎಷ್ಟು ಜವಾಬ್ದಾರಿ ಇದೆ. ಪ್ರತಿಕ್ಷಣವೂ ಭಯದಿಂದಲೇ ಕಾರ್ಯನಿರ್ವಹಿಸುತ್ತೇನೆ. ವಿಧಾನಸಭೆಯ ಎಲ್ಲ ಶಾಸಕರೂ ನನಗೆ ಸಮಾನರು ಎಂದು ಬೆಳಗಾವಿ ಅಧಿವೇಶನದಲ್ಲಿ ಸ್ಪೀಕರ್ ರಮೇಶ್ ಹೇಳಿದರು.
ಸ್ನೇಹ ಬೇರೆ , ನಿಯಮ ಬೇರೆ ಎಂದ ರಮೇಶ ಕುಮಾರ್ ಅವರು ಕೆಸಿ ವ್ಯಾಲಿ ನೀರಾವರಿ ಯೋಜನೆಯಿಂದ ಮಹದೇವಪುರ ರಸ್ತೆಗಳು ಹಾಳಾದ ಬಗ್ಗೆ ಸಣ್ಣ ನೀರಾವರಿ ಸಚಿವ ಸಿ ಎಸ್ ಪುಟ್ಟರಾಜು ಅವ್ರಿಗೆ ಪ್ರಶ್ನೆ ಕೇಳಿದ್ದರು ಅರವಿಂದ್ ಲಿಂಬಾವಳಿ. ಅಧಿವೇಶನದ ಬಳಿಕ ಕ್ಷೇತ್ರಕ್ಕೆ ಬಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹಾರದ ಭರವಸೆ ಕೊಟ್ಟರು ಸಚಿವ ಪುಟ್ಟರಾಜು. ಆ ಸಂದರ್ಭ ಸ್ಪೀಕರ್ ಅರವಿಂದ್ ಲಿಂಬಾವಳಿ ಅವ್ರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆಲಸ ಮಾಡಿ ಕೊಡ್ತಾರೆ ಅಂತಾ ಭರವಸೆ ಕೊಟ್ರು. ಸ್ಪೀಕರ್ ಹೇಳಿದ್ದನ್ನ ನಾನು ನಂಬ್ತೇನೆ, ಸರ್ಕಾರದ ಮೇಲೆ ನಂಬಿಕೆ ಇಲ್ಲ ಎಂದ ಲಿಂಬಾವಳಿ. ಲಿಂಬಾವಳಿ ಹೇಳಿದಾರೆ ಆದರೆ ನನ್ನ ಮೇಲೆ ತಕ್ಕಡಿ ಇದೆ ಎಂದರು ಸ್ಪೀಕರ್ ರಮೇಶ್ ಕುಮಾರ್.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಕೆ ಹೊಸಳ್ಳಿ ಗ್ರಾಮದ ಶಾಲೆ ಎದುರೇ ಕೆರೆ ; ಸಾವಿನ ಸನಿಹ ಮಕ್ಕಳ ಕಲಿಕೆ : ಕಾಂಪೌಂಡ್ ನಿರ್ಮಿಸಲು ಗ್ರಾಮಸ್ಥರ ಮನವಿಗೆ ಕಿವಿಗೊಡದ ಅಧಿಕಾರಿಗಳು
ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಆಟ-ಪಾಠ ಕಾಣುವಂತಾಗಿದೆ ಎಂಬ ಆರೋಪದ ಜೊತೆಗೆ ಕಾಳಜಿಯ ಒತ್ತಾಯ ಕೇಳಿ ಬರುತ್ತಿದೆ.
ಶಾಲೆಯ ಎದುರೇ ಕೆರೆ ಮತ್ತು ಗ್ರಾಮದ ಸಂಪರ್ಕಿಸುವ ರಸ್ತೆ ಜೊತೆಗೆ ವಿದ್ಯುತ್ ಸಂಪರ್ಕವುಳ್ಳ ಟ್ರ್ಯಾನ್ಫರ್ಮರ್ ಹಾಗೂ ಬೋರ್ವೆಲ್ ಇದೆ. ಅಲ್ಲದೇ ತೆರೆದ ಒಳಚರಂಡಿ ಸಹ ಇದೆ. ಹೀಗೆ ಅಪಾಯಕ್ಕೆ ಕಾದು ಕುಳಿತು ಜೀವ ಬಲಿ ಪಡೆಯುವಂತಹ ಪರಿಸ್ಥಿತಿ ಇದ್ದು, ಶಾಲೆಗೆ ತಡೆಗೋಡೆ ಇಲ್ಲದೇ ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿ 20 ರಿಂದ 30 ವಿದ್ಯಾರ್ಥಿಗಳ ಜೀವದ ಪ್ರಶ್ನೆಯಾಗಿ ಉಳಿದಿದೆ.
ಹೀಗೆ ವಿದ್ಯಾರ್ಥಿಗಳು ಆಟದ ವೇಳೆಯಲ್ಲಾಗಲೀ ಅಥವಾ ಶಾಲೆಗೆ ಬರುವಾಗ, ಮನೆಗೆ ಹೋಗುವಾಗ ಈ ಯಾವುದಾದರೂ ಅಪಾಯಕ್ಕೆ ಸಿಲುಕಿದರೆ ಅಮೂಲ್ಯ ಜೀವ ಬಲಿಯಾಗಲಿದೆ. ಅಕ್ಷರ ಜ್ಞಾನ ಪಡೆಯಲು ಬರುವ ವಿದ್ಯಾರ್ಥಿಗಳಿಗೆ ಶಾಲೆಯೇ ಭವಿಷ್ಯ ಕಟ್ಟಿಕೊಡುವ ಬದಲು ಜೀವ ಬಲಿಪಡೆಯುವ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಹೊಸದಾಗಿ ನಿರ್ಮಾಣವಾಗಬೇಕಿರುವ ಶಾಲಾ ಕಾಂಪೌಂಡ್ 4 ವರ್ಷಗಳೇ ಕಳೆದರೂ ನಿರ್ಮಾಣ ಕಾಣದಂತಾಗಿದೆ ಎಂಬುದು ಈ ಶಾಲೆಯ ಕೆಲ ಹಳೇ ವಿದ್ಯಾರ್ಥಿಗಳ ಮುತುವರ್ಜಿಯಾಗಿದೆ.
ಈ ಶಾಲೆಗೆ ಹಿಂದೆ ಶಾಲಾ ಕಾಂಪೌಂಡ್ ದುರಸ್ತಿಯಲ್ಲಿದ್ದ ಕಾರಣ ಹೊಸ ಕಾಂಪೌಂಡ್ ನಿರ್ಮಾಣಕ್ಕಾಗಿ 2021-22ರ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ -2005 ರ ಮಹಾತ್ಮ ಗಾಂಧಿ ನರೇಗಾ ಕಾಮಗಾರಿಯಡಿ 4 ಲಕ್ಷ ರೂ. ಮಂಜೂರು ಆಗಿತ್ತು. ಸುಮಾರು ನಾಲ್ಕು ವರ್ಷಗಳೇ ಕಳೆದರೂ ಇನ್ನೂ ಈ ಶಾಲೆಗೆ ಕಾಂಪೌಂಡ್ ಮರೀಚಿಕೆಯಾಗಿದೆ ಎನ್ನುತ್ತಾರೆ ಹಳೇ ವಿದ್ಯಾರ್ಥಿ ಮಂಜುನಾಥ್ ಆರ್.
“ರಸ್ತೆಯ ಸಂಪರ್ಕಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಅಪಘಾತ ಆಗುವ ಸಂದರ್ಭ ಇದೆ ಮತ್ತು ಶಾಲೆಯ ಮುಂಭಾಗದಲ್ಲಿ ಗ್ರಾಮದ ಕೆರೆ ಇದ್ದು ಕೆರೆವು ಸಂಪೂರ್ಣವಾಗಿ ನೀರಿನಿಂದ ತುಂಬಿದೆ ಇದರಿಂದ ಮಕ್ಕಳ ಜೀವಕ್ಕೆ ತೊಂದರೆ ಆಗುವ ಸಂಭವ ಸಹ ಇದೆ. ಈ ಎಲ್ಲ ತೊಂದರೆಗಳಿಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ನಿರ್ಲಕ್ಷತನ ಎಂದು ಹೇಳಬಹುದು. ಶಾಸಕರು ಸಹ ಇದರ ಬಗ್ಗೆ ಹೆಚ್ಚಿನ ಗಮನವಹಿಸಬೇಕಾಗಿದೆ.”
|ಹಳೇ ವಿದ್ಯಾರ್ಥಿ ಮಂಜುನಾಥ್
“ಶಾಲೆಯ ಕಾಂಪೌಂಡ್ ನಿರ್ಮಾಣ ವಿಚಾರವಾಗಿ ನಾನೂ ಸಹ ಪಿಡಿಓಗೆ ಸಾಕಷ್ಟು ಮನವಿ ಸಾಕಾಗಿದೆ. ಯಾವುದೇ ಸರಿಯಾದ ಸ್ಪಂದನೆ ಇಲ್ಲ. ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಹಿಂದೆ ಅಡೆ-ತಡೆಯೂ ಉಂಟಾಯಿತು. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರು ನಿರ್ಮಾಣಕ್ಕೆ ಮುಂದಾಗದಂತಾಯಿತು. ಶಾಲೆಗೆ ಕಾಂಪೌಂಡ್ ಇಲ್ಲದೇ ಅಪಾಯದ ವಾತಾವರಣವಿರುವ ಕಾರಣ ಯಾವುದೇ ಪಠ್ಯೇತರ ಚಟುವಟಿಕೆಗಳು ನಡೆಸಲು ಆಗುತ್ತಿಲ್ಲ. ಮಕ್ಕಳ ಜೀವವನ್ನು ನಾನು ಕಾವಲುಗಾರನಾಗಿ ಕಾಯುತ್ತಿದ್ದೇನೆ. ಶಾಲೆಗೆ ಕಾಂಪೌಂಡ್ ಇಲ್ಲದೇ ತೆರೆದ ಪ್ರದೇಶವಾಗಿರುವ ಕಾರಣ ಮದ್ಯ ವ್ಯಸನಿಗಳ ತಾಣವಾಗಿದ್ದು, ದಿನವೂ ಮದ್ಯದ ಬಾಟಲ್, ಪೌಚ್ಗಳ ಸ್ವಚ್ಚಗೊಳಿಸಿ ಶಾಲೆಯೊಳಗೆ ಕರ್ತವ್ಯಕ್ಕೆ ತೆರಳುವಂತಾಗಿದೆ.”
| ಜಯರಾಜ್, ಮುಖ್ಯೋಪಾದ್ಯಾಯರು
“ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ
ನರೇಗಾ ಯೋಜನೆಯಡಿಯ ಈ ಕಾಮಗಾರಿ ಕೈಗೊಳ್ಳಲು ಉದ್ಯೋಗ ಖಾತ್ರಿ ಕಾರ್ಡ್ವುಳ್ಳ ಕಾರ್ಮಿಕರು ಮುಂದಾಗುತ್ತಿಲ್ಲ. ಕಾಂಪೌಂಡ್ ನಿರ್ಮಾಣದಲ್ಲಿ ತಡವಾಗುತ್ತಿರುವುದಾಗಲೀ, ಅಡೆ-ತಡೆ ಬಗ್ಗೆಯಾಗಲೀ ನನಗೆ ಯಾವುದೇ ಮಾಹಿತಿ ಇಲ್ಲ. ಇದೀಗ ಶಾಲೆಯ ಹಳೇ ವಿದ್ಯಾರ್ಥಿಗಳು ಸಹಕಾರ ನೀಡಲು ಮುಂದಾಗಿದ್ದು, ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ ಬರಲಿದೆ”
| ರಶ್ಮಿ, ಪ್ರಭಾರ ಪಿಡಿಓ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

