Connect with us

ರಾಜಕೀಯ

ಮೋದಿ ಪರ ಸ್ಪೀಕರ್ ಬ್ಯಾಟಿಂಗ್; ಏಕ್ ದೇಶ್ ಏಕ್ ಚುನಾವಣೆಗೆ ಸಹಮತ

Published

on

ಸುದ್ದಿದಿನ ದೆಹಲಿ: ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸವರ ಬ್ಯಾಟಿಂಗ್ ಮಾಡಿದ್ದು, ಪ್ರಧಾನಿ ಮೋದಿ ಅವರ ದೇಶದಲ್ಲಿ ಏಕಕಾಲದಲ್ಲಿ ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಗಳ ಪರಿಕಲ್ಪನೆಯನ್ನು ಬೆಂಬಲಿಸಿದ್ದಾರೆ. ಕಾಮನ್ ವೆಲ್ತ್ ಅಸೋಸಿಯೇಷನ್ ರೀಜನ್- IV ಸಮಾವೇಶದಲ್ಲಿ ಮಾತನಾಡಿ, ನಮ್ಮ ಕಾಳಜಿಯನ್ನು ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಹೇಳುತ್ತೇವೆ ಹೊರತು ನಾವು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

“ಭಾರತವು ಮೊದಲೇ ಲೋಕಸಭೆ ಮತ್ತು ವಿಧಾನ ಸಭೆಗಳಿಗೆ ಏಕಕಾಲಿಕ ಚುನಾವಣೆಗಳ ವ್ಯವಸ್ಥೆಯನ್ನು ಅನುಸರಿಸಿದೆ. ವಿವಿಧ ಹಂತಗಳಲ್ಲಿ ಚುನಾವಣೆ ನಡೆಸುವುದು ಅನೇಕ ಸಮಸ್ಯೆಗಳ ಸೃಷ್ಟಿ ಕಾರಣವಾಗುತ್ತೆ. ಪ್ರಧಾನಿ ನರೇಂದ್ರ ಮೋದಿ ಅವರ ಏಕಕಾಲದಲ್ಲೇ ಚುನಾವಣೆ ನಡೆಸುವುದು ಸೂಕ್ತ, ಅನೇಕ ಸಮಸ್ಯೆಗಳನ್ನು ತಡೆಗಟ್ಟಬಹುದು. ಹೆಚ್ಚು ಖರ್ಚು ಮಾಡಲಾಗುತ್ತಿದ್ದ ಹಣ, ಸಮಯ ಉಳಿತಾಯವಾಗುತ್ತದೆ. ಸಂವಿಧಾನಾತ್ಮಕ ಅಂಶಗಳನ್ನು ಒಳಗೊಂಡಂತೆ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಯ ನಂತರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮಹಾಜನ್ ಹೇಳಿದರು.

“ಒಂದು ರಾಷ್ಟ್ರ, ಒಂದು ಚುನಾವಣೆ” ಎಂಬ ಕಲ್ಪನೆಯು ಹಣ ಮತ್ತು ಸಮಯವನ್ನು ನಿಸ್ಸಂದೇಹವಾಗಿ ಉಳಿಸಲಿದೆ. ಚುನಾವಣೆಗಳಿಗಾಗಿ ಭದ್ರತಾ ಪಡೆಯನ್ನು ನಿಯೋಜನೆ ಮಾಎಉವುದನ್ನು ತಪ್ಪಿಸಬಹುದು ಎಂದು ಹೇಳಿದರು. ಹರಿಯಾಣ, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ, ಗುಜರಾತ್‌ನ ವಿಧಾನ ಸಭೆ ಸ್ಪೀಕರ್ ಗಳು, ಡೆಪ್ಯುಟಿ ಸ್ಪೀಕರ್ ಗಳು ಮತ್ತು ಶಾಸಕರು ಹಾಜರಿದ್ದರು.

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending