ದಿನದ ಸುದ್ದಿ
ಪ್ರತೀ ತಾಲ್ಲೂಕಿನಲ್ಲಿ ಸ್ವ ಉದ್ಯೋಗ ಕಲ್ಪಿಸಲು ವಿಶೇಷ ನೆರವು : ಸಿಎಂ ಬೊಮ್ಮಾಯಿ
ಸುದ್ದಿದಿನ, ಬೆಂಗಳೂರು : ರಾಜ್ಯದ ಪ್ರತೀ ತಾಲ್ಲೂಕಿನಲ್ಲಿ ಹೆಚ್ಚುವರಿಯಾಗಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು 100ಕ್ಕೂ ಹೆಚ್ಚು ಯುವಕರಿಗೆ ಲಿಡ್ಕರ್ ಸಂಸ್ಥೆ, ಉದ್ಯೋಗ ಕಲ್ಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
4 ನೇ ವಿಶ್ವ ಮಾದಿಗ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, 3 ಲಕ್ಷ 30 ಸಾವಿರ ಚರ್ಮೋದ್ಯಮಗಳಿದ್ದು, ಇವುಗಳಿಗೆ ಆಧುನಿಕ ತಂತ್ರಜ್ಞಾನ ಹಾಗೂ ಉಪಕರಣಗಳನ್ನು ಬಳಸುವ ಮೂಲಕ ಚರ್ಮದ ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಗುಣಮಟ್ಟದ ಉತ್ಪಾದನೆ ಮಾಡಿ ರಫ್ತು ಮಾಡಲು ಪ್ರೋತ್ಸಾಹ ನೀಡಲಾಗುವುದು ಎಂದರು.
ಪರಿಶಿಷ್ಟ ಜಾತಿ ಪಂಗಡ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಉದ್ಯಮ ಸ್ಥಾಪನೆ ಮಾಡುವವರಿಗೆ ಪ್ರೋತ್ಸಾಹಧನ ಜೊತೆಗೆ ರಿಯಾಯಿತಿ ವಿದ್ಯತ್ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದರು. ಸಮಾರಂಭದಲ್ಲಿ ಸಂಪುಟದ ಸಹೋದ್ಯೋಗಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243