ದಿನದ ಸುದ್ದಿ

ಬಳ್ಳಾರಿ ಜಿಲ್ಲೆಯಲ್ಲಿ ಅರಣ್ಯ ಅಭಿವೃದ್ಧಿಗೆ ವಿಶೇಷ ಒತ್ತು : ಸಚಿವ ಬಿ. ಶ್ರೀರಾಮುಲು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಬಳ್ಳಾರಿ ಜಿಲ್ಲೆಯಲ್ಲಿ ಅರಣ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿಯಲ್ಲಿಂದು ಮಾತನಾಡಿದ ಅವರು, ಜಿಲ್ಲಾ ಖನಿಜ ನಿಧಿಯ ಅನುದಾನ ಬಳಸಿಕೊಂಡು, ಮರ ಗಿಡಗಳನ್ನು ಬೆಳೆಸಿ, ನೀರು ಸಂರಕ್ಷಿಸುವ ಕೆಲಸ ಮಾಡಿ, ಪರಿಸರ ಉಳಿಸಯವ ನಿಟ್ಟಿನಲ್ಲಿ ಸರಕಾರದ ಜೊತೆಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದರು.

ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ಒಂದು ಸಸಿ ನೆಡಬೇಕು, ದೇಶದ 21 ರಾಜ್ಯಗಳಲ್ಲಿ ಅರಣ್ಯ ಪ್ರದೇಶ ಕಡಿಮೆಯಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ ಎಂದರು. ಬಳ್ಳಾರಿಯಲ್ಲಿಂದು ವಿಶ್ವ ಪರಿಸರ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸಚಿವರು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version