ದಿನದ ಸುದ್ದಿ

ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ವಿಶೇಷ ಅನುದಾನ : ಸಚಿವೆ ಶಶಿಕಲಾ ಜೊಲ್ಲೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯದ ಧಾರ್ಮಿಕ ( Religious ) ಸಂಸ್ಥೆಗಳ ( institutions ) ಅಭಿವೃದ್ಧಿಗೆ (Development) ಹೆಚ್ಚುವರಿಯಾಗಿ 142 ಕೋಟಿ 59 ಲಕ್ಷ ರೂಪಾಯಿ ವಿಶೇಷ ಅನುದಾನ ( Special Grant) ಒದಗಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ (muzrai haj and wakf ) ಸಚಿವೆ ಶಶಿಕಲಾ ಜೊಲ್ಲೆ (Shashikala Jolle ) ತಿಳಿಸಿದ್ದಾರೆ.

ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯದ ವಿವಿಧ ಮಠಗಳು, ದೇವಸ್ಥಾನಗಳು, ಸಂಘ ಸಂಸ್ಥೆಗಳು ಮತ್ತು ಟ್ರಸ್ಟ್ ಗಳಿಗೆ ಒಟ್ಟು 142 ಕೋಟಿ 59 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಅಡಿಕೆ ಮೇಲಿನ ಆಮದು ಸುಂಕ ಹೆಚ್ಚಿಸಲು ಕೇಂದ್ರಕ್ಕೆ ರಾಜ್ಯ ನಿಯೋಗ ಮನವಿ : ಆರಗ ಜ್ಞಾನೇಂದ್ರ

ರಾಜ್ಯ ಸರ್ಕಾರ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕಳೆದ 10 ವರ್ಷಗಳಲ್ಲೇ ಅತ್ಯಂತ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243,

Trending

Exit mobile version