Connect with us

ದಿನದ ಸುದ್ದಿ

ಮನುಷ್ಯನಿಗೆ ಪರಿಸರ‌ ಮುಖ್ಯ ; ಪರಿಸರಕ್ಕೆ ಮನುಷ್ಯ ಮುಖ್ಯವಲ್ಲ : ನ್ಯಾಯಾಧೀಶ ಬಿ.ಕೆ.ಮನು

Published

on

ಸುದ್ದಿದಿನ, ಮಡಿಕೇರಿ : ಓಝೋನ್ ಪದರದ ರಕ್ಷಣೆ ನಮ್ಮೆಲ್ಲರ ಹೊಣೆ, ಮಾನವರಿಗೆ ಪರಿಸರ ಬಹಳ ಮುಖ್ಯ ಆದರೆ ಪರಿಸರಕ್ಕೆ ಮಾನವರು ಮುಖ್ಯವಲ್ಲ, ಇದನ್ನು ಅರಿತು ಪ್ರತಿಯೊಬ್ಬರು ಓಝೋನ್ ಪದರದ ರಕ್ಷಣೆಗೆ ಮುಂದಾಗಬೇಕೆಂದು ಮಡಿಕೇರಿಯ ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಬಿ.ಕೆ.ಮನು ಅವರು ನುಡಿದರು.

ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ, ಕ.ರಾ.ವಿ.ಪ.ಕೊಡಗು ಜಿಲ್ಲಾ ವಿಜ್ಞಾನ ಸಮಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಇಕೋ ಕ್ಲಬ್, ಸರ್ಕಾರಿ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ವಿಶ್ವ ಓಝೋನ್ ಪದರ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಬಿ.ಕೆ ಮನು ಅವರು ಓಝೋನ್ ಪದರ ಹಾನಿಯಾದಲ್ಲಿ ಮಾನವರಿಗೆ ಹಾಗೂ ಸಕಲ ಜೀವಿಗಳಿಗೆ ತೊಂದರೆ ಉಂಟಾಗುವುದು, ಆದ್ದರಿಂದ ಓಝೋನ್ ಪದರ ಸಂರಕ್ಷಣೆಗೆ ಎಲ್ಲರೂ ಕಟಿಬದ್ದರಾಗಿರಬೇಕೆಂದು ಅವರು ತಿಳಿಸಿದರು.

ಓಝೋನ್ ಪದರ ಹಾನಿಯಿಂದ ಮಾನವರ ದೇಹಕ್ಕೆ ಜೀವ ಸಂಕುಲಕ್ಕೆ ದಕ್ಕೆಯಾಗುವುದು ಮತ್ತು ಜಲಚರಗಳಿಗೆ ಮಾರಕವಾದದ್ದು. ಈ ಕಾರ್ಯಕ್ರಮದ ವಿಚಾರವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಬೇರೆಯವರಿಗೂ ಓಜೋನ್ ಪದರದ ಸಂರಕ್ಷಣೆ ಕುರಿತು ಅರಿವು ಮೂಡಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಅವರು ಮಾತನಾಡಿ ಓಜೋನ್ ಪದರದ ಹಾನಿಯಿಂದ ನೇರಳಾತೀತ ನೀಲ ಕಿರಣಗಳು ಭೂಮಿಯನ್ನು ನೇರವಾಗಿ ಪ್ರವೇಶಮಾಡಿ ಜೀವ ಸಂಕುಲಕ್ಕೆ ಹಾನಿ ಉಂಟುಮಾಡುತ್ತದೆ. ಹಾಗೂ ಇದನ್ನು ತಡೆಯದಿದ್ದರೆ ಭೂಮಿಯ ನಾಶಕ್ಕೆ ನಾಂದಿಯಾಗುತ್ತದೆ. ಇಂಗಾಲ ಪ್ರಮಾಣದ ಬಳಕೆಗೆ ಕಡಿವಾಣ ಹಾಕಿ ಓಝೋನ್ ಪದರದ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಓಝೋನ್ ಪದರದ ರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ಶಿಥಿಲೀಕರಣ ಘಟಕಗಳಲ್ಲಿ ಹೊರಸೂಸುವ ಇಂಗಾಲದ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಮಿತಿಯ ಜಿಲ್ಲಾ ಸಂಯೋಜಕರಾದ ಟಿ.ಜಿ.ಪ್ರೇಮ್ ಕುಮಾರ್ ಅವರು ಮಾತನಾಡಿ ಪರಿಸರ ಸ್ನೇಹಿಯಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಪ್ರತಿಯೊಬ್ಬರೂ ಹೆಚ್ಚು ಹೆಚ್ಚ್ಚು ಗಿಡ-ಮರಗಳನ್ನು ಬೆಳೆಸಿ ಓಜೋನ್ ಪದರದ ರಕ್ಷಣೆ ಮಾಡಬೇಕು ಎಂದು ಅವರು ತಿಳಿಸಿದರು.ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಕೆಂಚಪ್ಪ ಅವರು ಮಾತನಾಡಿ ಪ್ರತಿಯೊಬ್ಬರಿಗೂ ಪರಿಸರ ಸಂರಕ್ಷಣೆ ಮಾಡುವುದು ಅತಿ ಮುಖ್ಯ ಕರ್ತವ್ಯವಾಗಿದ್ದು, ಎಲ್ಲರೂ ಇದನ್ನು ಮನಗಂಡು ಪರಿಸರವನ್ನು ರಕ್ಷಿಸಿ ಓಝೋನ್ ಪದರದ ಸಂರಕ್ಷಣೆ ಮಾಡಬೇಕೆಂದು ಹೇಳಿದರು.

ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಜಿ.ಶ್ರೀನಾಥ್ ಅವರು ಮಾತನಾಡಿ ಓಝೋನ್ ಪದರದ ಹಾನಿಯಿಂದ ಮಾನವರು ಚರ್ಮದ ಕಾನ್ಸರ್‍ಗೆ ತುತ್ತಾಗಬೇಕಾಗುತ್ತದೆ. ಹವಾ ನಿಯಂತ್ರಿತ ವಸ್ತುಗಳಿಂದ ಹೊರಸೂಸುವ ಇಂಗಾಲದಿಂದ ಓಝೋನ್ ಪದರಕ್ಕೆ ಹಾನಿಯಾಗಿ ನೇರಳಾತೀತ ನೀಲ ಕಿರಣಗಳು ನೇರವಾಗಿ ಭೂಮಿಯನ್ನು ತಲುಪಿ ಜೀವಸಂಕುಲಕ್ಕೆ ಭಾರಿ ಪ್ರಮಾಣದ ಹಾನಿಯನ್ನು ಉಂಟುಮಾಡುತ್ತದೆ. ಇದನ್ನು ಅರಿತು ಪ್ರತಿಯೊಬ್ಬರು ಪರಿಸರದ ಮೇಲಾಗುತ್ತಿರುವ ಮಾನವನ ಹಸ್ತ ಕ್ಷೇಪವನ್ನು ತಡೆಗಟ್ಟಬೇಕು. ಮರಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಬೆಳೆಸುವುದರಿಂದ ಓಜೋನ್ ಪದರವನ್ನು ರಕ್ಷಿಸಬಹುದಾಗಿದೆ. ಪ್ರಕೃತಿಯು ತನ್ನ ಸಮತೋಲನವನ್ನು ತಾನೇ ಮಾಡಿಕೊಳ್ಳುತ್ತದೆ ಎಂಬುದನ್ನು ಪ್ರತಿಯೊಬ್ಬರು ಅರಿತು ನೆಲ, ಜಲದ ರಕ್ಷಣೆಗೆ ಮುಂದಾಗಬೇಕೆಂದು ವೈಜ್ಞಾನಿಕವಾಗಿ ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್ ಅವರು ಮಾತನಾಡಿ ಪ್ರತಿಯೊಬ್ಬರೂ ಪರಿಸರದ ರಕ್ಷಣೆಗೆ ಮುಂದಾಗಬೇಕು. ಪ್ಲಾಸ್ಟಿಕ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಹೆಚ್ಚು ಗಿಡ ಮರಗಳನ್ನು ಬೆಳಸಿ ಓಝೋನ್ ಪದರವನ್ನು ರಕ್ಷಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಓಝೋನ್ ಪದರ ರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ಟಿ.ಜಿ.ಪ್ರೇಮ್ ಕುಮಾರ್ ಅವರು ಭೋದಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಕೆಂಚಪ್ಪ ಅವರು ಓಝೋನ್ ಪದರ ರಕ್ಷಣೆ ಕುರಿತ ಕರಪತ್ರವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಓಜೋನ್ ಪದರ ರಕ್ಷಣೆ ಕುರಿತು ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ಎಂ.ಇ.ಮೊಹಿದ್ದೀನ್, ಉಪ ಪರಿಸರ ಅಧಿಕಾರಿ ಡಾ.ಎಂ.ಕೆ.ಸುಧಾ, ಸಹಾಯಕ ಪರಿಸರ ಅಧಿಕಾರಿ ಶ್ರುತಿ, ಕಾನೂನು ಸೇವಾ ಪ್ರಾಧಿಕಾರದ ಸಹಾಯಕ ಆಡಳಿತ ಅಧಿಕಾರಿ ಜೋಯಪ್ಪ ಇತರರು ಇದ್ದರು. ಉಪನ್ಯಾಸಕರಾದ ಎಸ್.ನಂದೀಶ್ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಚಿದಾನಂದ ಅವರು ವಂದನಾರ್ಪಣೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂತರಂಗ1 week ago

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು...

ದಿನದ ಸುದ್ದಿ1 week ago

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌...

ದಿನದ ಸುದ್ದಿ3 weeks ago

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ...

ದಿನದ ಸುದ್ದಿ3 weeks ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ4 weeks ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ1 month ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ1 month ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ1 month ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ1 month ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ1 month ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

Trending