ದಿನದ ಸುದ್ದಿ
ರಾಜ್ಯ ಸರ್ಕಾರಿ ನೌಕರರಿಗೆ ವಿವಿಧ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ, ದಾವಣಗೆರೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರಿಗೆ ವಿವಿಧ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
2019-20 ನೇ ಸಾಲಿಗೆ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರಿಗೆ 2020 ಜನವರಿ 3 ಮತ್ತು 4 ರಂದು ವಿವಿಧ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗೆ ಪ್ರವೇಶ ಪತ್ರ ಸಲ್ಲಿಸಲು ಡಿ.31 ಕೊನೆಯ ದಿನವಾಗಿದೆ.
ಪ್ರವೇಶ ಪತ್ರದಲ್ಲಿ ಮೊಟ್ಟಮೊದಲ ಕೆ.ಜಿ.ಐ.ಡಿ ನಂ, ಕ್ರೀಡಾಪಟುವಿನ ಹೆಸರು, ಇಲಾಖೆ ಹೆಸರು, ಪದನಾಮ ಹಾಗೂ ಭಾಗವಹಿಸುವ ಕ್ರೀಡೆಗಳ ವಿವಿರಗಳನ್ನು ಕಡ್ಡಾಯವಾಗಿ ನಮೂದಿಸತಕ್ಕದು.
ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾ ಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ. 1 ಟ್ರ್ಯಾಕ್ ಮತ್ತು 2 ಫೀಲ್ಡ್ ಅಥವಾ 2 ಟ್ರ್ಯಾಕ್ 1 ಫೀಲ್ಡ್, ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸಬಹುದೆಂದು ಎಂದು ಯುವ ಸಬಲೀಕರಣ ಮತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243