ದಿನದ ಸುದ್ದಿ

ದಾವಣಗೆರೆ | ಪ.ಜಾತಿ-ಪ.ಪಂ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯ ಅಡಿಯಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾತಿ-ಪ.ಪಂ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿರುತ್ತದೆ. ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾವುದಿಲ್ಲ. ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇವರಿಂದ ಧೃಡೀಕರಿಸಿಕೊಂಡು ನಂತರ, http://karunadu.karnataka.gov.in/dyes
ವೆಬ್‍ಸೈಟ್ ಮೂಲಕ ಆಪ್‍ಲೋಡ್ ಮಾಡಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version