ಕ್ರೀಡೆ
ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಆನ್‍ಲೈನ್ ಅರ್ಜಿ ಆಹ್ವಾನ
ಸುದ್ದಿದಿನ, ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯಡಿ ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತ ಕ್ರೀಡಾ ಪಟುಗಳು ಕಚೇರಿಯ ಜಾಲತಾಣ http://serviceonline.gov.in/karantaka ಮೂಲಕ ಆನ್‍ಲೈನ್‍ನಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮಾಹಿತಿಗಾಗಿ ದೂ.ಸಂ.: 08182-223328ನ್ನು ಸಂಪರ್ಕಿಸುವುದು.