ದಿನದ ಸುದ್ದಿ
ಕ್ರೀಡಾ ಇಲಾಖೆಯಲ್ಲಿ ಟೆಂಡರ್ ಇಲ್ಲದೇ ಕಾಮಗಾರಿ ಮಂಜೂರಾತಿ ಇಲ್ಲ
ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ಕಾಮಗಾರಿಗಳನ್ನು ಟೆಂಡರ್ ಆಹ್ವಾನಿಸಿಯೇ ಅನುಷ್ಠಾನಗೊಳಿಸುವಂತೆ ಅವರು ಸೂಚಿಸಿದರು.
174 ಕೋಚ್‌ಗಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮ ಅಂತಿಮಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
1 ಸಾವಿರದ 486 ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕಂಠೀರವ ಕ್ರೀಡಾಂಗಣದಲ್ಲಿ ವಸ್ತುಸಂಗ್ರಹಾಲಯ ನಿರ್ಮಾಣ ಕಾರ್ಯದಲ್ಲಿ ಯಾವುದೇ ಪ್ರಗತಿ ಇಲ್ಲದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243