ದಿನದ ಸುದ್ದಿ
ಎಸ್.ಎಸ್.ಮಲ್ಲಿಕಾರ್ಜುನ್ ನಿವಾಸದಲ್ಲಿ ಬಸವ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ : ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಮಂಗಳವಾರ ಬಸವ ಜಯಂತಿಯನ್ನು ಆಚರಿಸಲಾಯಿತು.
ಪ್ರತಿವರ್ಷ ಎಸ್.ಎಸ್. ಮಲ್ಲಿಕಾರ್ಜುನ್ ಕುಟುಂಬದವರು ಎತ್ತುಗಳಿಗೆ ಪೂಜೆ ಮಾಡುವ ಮೂಲಕ ಬಸವ ಜಯಂತಿಯನ್ನು ಆಚರಿಸುತ್ತಾ ಬಂದಿದ್ದಾರೆ. ದುಗ್ಗಾವತಿಯಲ್ಲಿ ಸಾಕಿರುವ ಕಿಲಾರಿ ಎತ್ತುಗಳಿಗೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಶ್ರೀಮತಿ ಪ್ರಭಾ ಎಸ್.ಮಲ್ಲಿಕಾರ್ಜುನ್, ಪುತ್ರ ಸಮರ್ಥ, ಪುತ್ರಿ ಶ್ರೇಷ್ಠ, ಪುತ್ರ ಶಿವ ಅವರು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಾ. ಉದಯಶಂಕರ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಜಿ.ಎಸ್.ಮಂಜುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಕರಿಬಸಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಗಾನಹಳ್ಳಿ ಪರಶುರಾಮ್, ಕಾಡಜ್ಜಿ ಚಂದ್ರಣ್ಣ, ಹನುಮಂತರಾವ್ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243