ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ | ಉಚಿತ ಬಸ್ ಪ್ರಯಾಣಕ್ಕೆ ಅವಕಾಶ
ಸುದ್ದಿದಿನ,ಗದಗ : ಜಿಲ್ಲೆಯಲ್ಲಿ ಸೆ.21 ರಿಂದ 28ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆಳು ನಡೆಯುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಸಾರಿಗೆ ಸಂಸ್ಥೆ ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243