ದಿನದ ಸುದ್ದಿ
ಜೂನ್ 25 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಶುರು : ಸಚಿವ ಸುರೇಶ್ ಕುಮಾರ್
ಸುದ್ದಿದಿನ,ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದಿನ ಪತ್ರಿಕಾ ಗೋಷ್ಠಿಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಉಮಾಶಂಕರ್ ಅವರು, ಆಯುಕ್ತರಾದ ಜಗದೀಶ್ ಸೇರಿದಂತೆ ಅನೇಕರಿದ್ದಾರೆ. ಮಾರ್ಚ್ 27ರಿಂದ ಏಪ್ರಿಲ್ 9ರವರೆಗೆ ನಡೆಯಬೇಕಿತ್ತು. ಆದರೆ ಲಾಕ್ ಡೌನ್ ಪರಿಣಾಮ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿರಲಿಲ್ಲ. ಈ ಬಗ್ಗೆ ಅನೇಕ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ ಎಂದರು.
8 ಲಕ್ಷದ 48 ಸಾವಿರದ 196 ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬಹಳಷ್ಟು ಚರ್ಚೆ ಮಾಡಿ, ದಿನಾಂಕವನ್ನು ನಿರ್ಧರಿಸಿದ್ದೇವೆ. ಜೂನ್ 25ರಿಂದ 4 ಜುಲೈವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿರುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243