ದಿನದ ಸುದ್ದಿ
ನಾಳೆ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ
ಸುದ್ದಿದಿನ ಡೆಸ್ಕ್ : 2021-2022ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ.
ನಾಳೆ ಮಧ್ಯಾಹ್ನ 12.30 ಕ್ಕೆ www.karresults.nic.in ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಸಚಿವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯದ ಸುಮಾರು 8 ಲಕ್ಷ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243