ದಿನದ ಸುದ್ದಿ
ನಾಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಹಿಜಬ್ ನಿಷೇಧ
ಸುದ್ದಿದಿನ,ಬೆಂಗಳೂರು: ನಾಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದ್ದು, ಪರಿಕ್ಷಾ ಕೊಠಡಿಯೊಳಗೆ ಹಿಜಬ್ ಧರಿಸುವುದನ್ನು ನಿಷೇಧಿಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಭಾನುವಾರ ಹೇಳಿದರು.
ಪರೀಕ್ಷೆಗೆ ಎಸ್‍ಎಸ್‍ಎಲ್‍ಸಿ ಬೋರ್ಡ್ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷೆಗೆ ಸರ್ಕಾರವು ಸಮವಸ್ತ್ರವನ್ನು ಕಡ್ಡಾಯ ಮಾಡಿದ್ದು, ಹಿಜಬ್‍ಗೆ ನಿಷೇಧವನ್ನು ಹಾಕಲಾಗಿದೆ.
ಏಪ್ರಿಲ್ 11 ರ ವರೆಗೆ ಪರೀಕ್ಷೆ ನಡೆಯಲಿದ್ದು, ಕೊರೋನಾ ಆತಂಕ ಮುಗಿದ ಎರಡು ವರ್ಷಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆ ನಡೆಯುತ್ತಿದ್ದು, ಹಳೆಯ ಮಾದರಿಯಲ್ಲಿ 625 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಮೊದಲ ದಿನವಾದ ನಾಳೆ ಪ್ರಥಮ ಭಾಷೆಯ ಪರೀಕ್ಷೆಗಳು ನಡೆಯಲಿವೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.
ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. pic.twitter.com/gJavp9gv1X
— B.C Nagesh (@BCNagesh_bjp) March 27, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243