ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

Published

on

ಸುದ್ದಿದಿನ,ದಾವಣಗೆರೆ : ಜೂ.25 ರಿಂದ ಜುಲೈ. 03 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜಿಲ್ಲೆಯಲ್ಲಿ ಒಟ್ಟು 93 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವುದರಿಂದ ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ದಿನಗಳಂದು ಪರೀಕ್ಷಾ ಸಮಯದಲ್ಲಿ 200 ಮೀಟರ್ ಪರೀದಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕರಿಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಪರೀಕ್ಷೆ ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್‍ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version