ದಿನದ ಸುದ್ದಿ
ಪತಿಯೇ ಸ್ಪೂರ್ತಿ, ರೂಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ : ಭವಾನಿ ರೇವಣ್ಣ
ಸುದ್ದಿದಿನ, ಹಾಸನ : ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಹಾಸನ ನಂಬರ್ ಒನ್ ಆಗಿದ್ದರ ಸಾಧನೆಗೆ ಪತಿಯೇ ಸ್ಫೂರ್ತಿ, ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ರೇವಣ್ಣ ಹೇಳಿದ್ದರಲ್ಲಿ ಸತ್ಯ ಇದೆ. ನಾನು ಜಿಲ್ಲಾ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಆಗಿದ್ದಾಗ ಹಾಸನ 31ನೇ ಸ್ಥಾನದಲ್ಲಿತ್ತು. ಪ್ರತಿ ತಿಂಗಳು ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಕಾರ್ಯಕ್ರಮ ರೂಪಿಸಿದ್ದೆನು. ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದ ರೇವಣ್ಣ ಅವರೇ ಸಾಧನೆಗೆ ಸ್ಫೂರ್ತಿ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243