ದಿನದ ಸುದ್ದಿ
ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಸೋಮವಾರ ಎಸ್ ಎಸ್ ಎಲ್ ಸಿ ಫಲಿತಾಂಶ..!
ಸುದ್ದಿದಿನ,ಬೆಂಗಳೂರು:ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು ವೆಬ್ಸೈಟ್ ಮತ್ತು ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಇದರೊಂದಿಗೆ ವಿದ್ಯಾರ್ಥಿಗಳು ನೋಂದಾಯಿಸಿದ ಮೊಬೈಲ್ ಸಂಖ್ಯೆಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಮನೆಯಲ್ಲೇ ಕುಳಿತು ಫಲಿತಾಂಶದ ಮಾಹಿತಿ ಪಡೆಯಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243