ದಿನದ ಸುದ್ದಿ
ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೆ ‘ಸಂಕಲ್ಪ-2021’ ; ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸುವ ಸವಾಲಿನ ಕೆಲಸ ಶಿಕ್ಷಕರ ಮೇಲಿದೆ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಜಗತ್ತಿನಾದ್ಯಂತ ವಿಶಿಷ್ಟ ಅನುಭವ ನೀಡಿದ ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶ ಪಡೆಯುವಂತೆ ಶಿಕ್ಷಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಸವಾಲಿನ ಸಮಯ ಇದಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರದಂದು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಶಿಕ್ಷಣ ಆಯುಕ್ತರ ನಿರ್ದೇಶನದ ಮೇರೆಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆ ಪ್ರಯುಕ್ತ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮಾರ್ಗದರ್ಶನ ನೀಡಲು ಏರ್ಪಡಿಸಲಾಗಿದ್ದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೊರೊನಾ ಹಿನ್ನೆಲೆ ಲಾಕ್‍ಡೌನ್‍ನಿಂದಾಗಿ ಎಲ್ಲ ಶಾಲೆಗಳು ಬಂದ್ ಆಗಿದ್ದು, ಜನವರಿ 1 ರಿಂದ ಹತ್ತನೇ ತರಗತಿಗಳನ್ನು ಆರಂಭಿಸಲಾಗಿದೆ. ಪ್ರಾರಂಭದಲ್ಲಿ ಹಾಜರಾತಿ ಕಮ್ಮಿ ಇದ್ದು ಈಗ ಶೇ.75 ಇದೆ. ಇನ್ನುಳಿದ ಮಕ್ಕಳನ್ನೂ ಮನವೊಲಿಸಿ ಶಾಲೆಗೆ ಕರೆತರುವ ಯತ್ನ ನಡೆಯುತ್ತಿದೆ. ನಾಲ್ಕು ತಿಂಗಳ ಅವಧಿಯಲ್ಲಿ ಒಂದು ವರ್ಷದ ಪಾಠಗಳನ್ನು ಪೂರ್ಣಗೊಳಿಸಿ, ಪರೀಕ್ಷೆಗೆ ಸಜ್ಜುಗೊಳಿಸುವ ಸವಾಲು ಶಿಕ್ಷಕರ ಮುಂದಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಶಿಕ್ಷಕರಿಗೆ ಸಹಕರಿಸಲು ಮತ್ತು ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಫಲಿತಾಂಶ ತಂದುಕೊಡಲು ‘ಸಂಕಲ್ಪ-2021’ ಮಾರ್ಗಸೂಚಿಗಳನ್ನು ಪ್ರೌಢಶಿಕ್ಷಕರಿಗೆ ಬಿಡುಗಡೆಗೊಳಿಸಿದೆ.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಷ್ಟವಾಗುವ ಇಂಗ್ಲಿಷ್ ಮತ್ತು ಗಣಿತ, ಉರ್ದು ಶಾಲೆ ಮಕ್ಕಳಿಗೆ ಕನ್ನಡ ಹೀಗೆ ಕಷ್ಟವಾಗುವ ವಿಷಯಗಳನ್ನು ಸುಲಭವಾಗಿ ಹೇಳಿಕೊಡುವ ತಂತ್ರಗಳು, ಕಡಿಮೆ ಅವಧಿಯಲ್ಲಿಯೇ ಹೆಚ್ಚು ಪರಿಣಾಮಕಾರಿಯಾಗಿ ಹೇಗೆ ವಿಷಯಗಳನ್ನು ಮನದಟ್ಟು ಮಾಡಿಸಬೇಕು ಎಂಬುದು ಸೇರಿದಂತೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಗಮನ ಹರಿಸಿ ಪರೀಕ್ಷೆಗೆ ಸಜ್ಜುಗೊಳಿಸುವ ಬಗ್ಗೆ ಅಂಶಗಳನ್ನು ಸಿದ್ದಪಡಿಸಿದ್ದು, ಈ ಪ್ರಕಾರ ಶಿಕ್ಷಕರು ಕಾರ್ಯೋನ್ಮುಖರಾಗಬೇಕೆಂದರು.
ಕಳೆದ ಬಾರಿ ಜಿಲ್ಲೆಯಲ್ಲಿ ಎರಡು ಶಾಲೆಗಳಲ್ಲಿ ಶೇ.0 ಫಲಿತಾಂಶ ಬಂದಿತ್ತು. ಇದು ಸಲ್ಲದು. ಶಿಕ್ಷಕರು ಶ್ರದ್ದೆ ಮತ್ತು ಬದ್ದತೆಯಿಂದ ಮಕ್ಕಳಿಗೆ ಕಲಿಸಿ ಉತ್ತಮ ಫಲಿತಾಂಶ ಬರುವಲ್ಲಿ ಶ್ರಮಿಸಬೇಕು. ಈ ಬಾರಿ ಹೀಗೆ ಶೇ.0 ಬರುವ ಶಾಲೆಗಳನ್ನು ಮುಚ್ಚಲು ಕ್ರಮ ವಹಿಸಿ ಅಂತಹ ಶಿಕ್ಷಕರ ವಿರುದ್ದ ಶಿಸ್ತಿನ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಎಲ್ಲರಿಗೂ ಇದು ಲಭಿಸುವುದಿಲ್ಲ. ಇದೊಂದು ಸೌಭಾಗ್ಯದ ಕೆಲಸವಾಗಿದೆ. ತಾವೂ ಶಿಕ್ಷಕ ವೃತ್ತಿಯನ್ನು ನಿರ್ವಹಿಸಿ ಬಂದಿದ್ದು, ಆ ಅನುಭವ ಅನನ್ಯವಾಗಿದೆ. ಈಗಲೂ ನನ್ನನ್ನು ರಾಜ್ಯದೆಲ್ಲೆಡೆ ಶಿಕ್ಷಕನಾಗಿ ಗುರುತಿಸಿ, ಗೌರವಿಸುವ ಶಿಷ್ಯರಿದ್ದಾರೆ ಎಂಬುದು ಹೆಮ್ಮೆಯ ವಿಚಾರ ಎಂದ ಅವರು ಒಬ್ಬ ಶಿಕ್ಷಕ ತನ್ನ ಕರ್ತವ್ಯವನ್ನು ನಿಷ್ಟೆಯಿಂದ ಮಾಡಿದ್ದೇ ಆದಲ್ಲಿ ಅವನಿಗೆ ದೊರಕುವ ಗೌರವ ಮತ್ತೊಬ್ಬರಿಗಿಲ್ಲ ಎಂದು ಅಭಿಪ್ರಾಯಪಟ್ಟರು.
ಕಳೆದ ಸಾಲಿನ ಮಾರ್ಚ್‍ನಿಂದ ಇಡೀ ಜಗತ್ತೇ ಕೊರೊನಾದಿಂದ ವಿಶಿಷ್ಟವಾದ ಅನುಭವಕ್ಕೊಳಗಾಗಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ವ್ಯವಸ್ಥೆ ಸೇರಿದಂತೆ ವೈಯಕ್ತಿಕ ಜೀವನವೂ ಒಂದು ಪ್ರಯೋಗಕ್ಕೆ ಒಳಪಟ್ಟಂತಾಗಿತ್ತು. ಇದೀಗ ಕೊರೊನಾ ವಿರುದ್ದ ನಮ್ಮಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿದ್ದು ಎಲ್ಲರಲ್ಲಿ ಧೈರ್ಯ ಬಂದಿದೆ.
ಲಾಕ್‍ಡೌನ್ ವೇಳೆಯೂ ಶೈಕ್ಷಣಿಕವಾಗಿ ಮಕ್ಕಳನ್ನು ತೊಡಗಿಸಲು ಅನೇಕ ಪ್ರಯತ್ನಗಳನ್ನು ಸರ್ಕಾರ ಮಾಡಿತ್ತು. ಸರ್ಕಾರಿ ಶಾಲೆಗಳಲ್ಲಿ ಕೂಡ ಆನ್‍ಲೈನ್ ಶಿಕ್ಷಣಕ್ಕೆ ಪ್ರಯತ್ನಿಸಲಾಗಿತ್ತು. ವಿದ್ಯಾಗಮ, ಓದುವ ಬೆಳಕು ಹೀಗೆ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿತ್ತು. ಆದರೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹತ್ತಿರವೇ ಇದ್ದು ಇದು ನಿಜವಾದ ಸವಾಲಿನ ಸಮಯ ಆಗಿದೆ.
ಇನ್ನು ಎರಡು ತಿಂಗಳ ಒಳಗೆ ವಿದ್ಯಾರ್ಥಿಗಳನ್ನು ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಜ್ಜುಗೊಳಿಸಬೇಕಿದ್ದು, ಮಕ್ಕಳು ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸಬೇಕು. ಯಾವ ವಿದ್ಯಾರ್ಥಿ ಯಾವ ವಿಷಯದಲ್ಲಿ ಹಿಂದಿದ್ದಾನೆ ಎಂದು ತಿಳಿದು ಪಾಠ ಹೇಳಿಕೊಡಬೇಕು ಎಂದ ಅವರು ಶಿಕ್ಷಕರು ರಾಷ್ಟ್ರ ಕಟ್ಟುವ ಕೆಲಸ ಮಾಡುತ್ತಿದ್ದು, ಕೊರೊನಾ ಕಾಲದಲ್ಲಿಯೂ ಉತ್ತಮ ಸೇವೆ ಸಲ್ಲಿಸಿರುವ ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ. ನಾನು ಮತ್ತು ಸಿಇಓ ಸದಾ ನಿಮ್ಮೊಟ್ಟಿಗಿದ್ದೇವೆ. ಅತ್ಯಂತ ಹುಮ್ಮಸ್ಸಿನಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಹಾಗೂ ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ.100 ಫಲಿತಾಂಶ ತರಲು ಹಗಲು ಇರುಳು ಶ್ರಮಿಸುತ್ತೇನೆಂದು ನಿರ್ಧಾರ ಕೈಗೊಳ್ಳಬೇಕೆಂದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆ ಹಿನ್ನೆಲೆಯಲ್ಲಿ ಇನ್ನು ಮುಂದೆ ಪ್ರೌಢಶಾಲಾ ಮುಖ್ಯ ಶಿಕ್ಷಕರು ಜಿಲ್ಲಾ ಕೇಂದ್ರಗಳಿಗೆ ಸಭೆ, ಇನ್ನಿತರೆ ಕಾರ್ಯಕ್ರಮ ಎಂದು ಅಲೆದಾಡುವಂತಿಲ್ಲ. ಡಿಡಿಪಿಐ, ಬಿಇಓ, ಇಓ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೇ ತಾಲ್ಲೂಕುಗಳಿಗೆ ಮತ್ತು ಶಾಲೆಗಳಿಗೆ ಭೇಟಿ ನೀಡಿ ಮಾರ್ಗದರ್ಶನ ನೀಡಬೇಕು.
ಕಳೆದ ಬಾರಿ ಎಸ್‍ಎಸ್‍ಎಲ್‍ಸಿ ಯಲ್ಲಿ ಜಿಲ್ಲೆಯ 41 ಶಾಲೆಗಳಲ್ಲಿ ಶೇ.100 ಫಲಿತಾಂಶ ಬಂದಿತ್ತು. ಈ ಬಾರಿ ಇನ್ನೂ ಹೆಚ್ಚಿನ ಶಾಲೆಗಳಲ್ಲಿ ಶೇ.100 ಫಲಿತಾಂಶ ಬರಬೇಕು. ಹೀಗೆ ಶೇ.100 ಫಲಿತಾಂಶ ಕೊಡುವ ಶಾಲೆಯ ಮುಖ್ಯೋಪಾಧ್ಯಾಯರನ್ನು ದೊಡ್ಡ ಕಾರ್ಯಕ್ರಮ ಏರ್ಪಡಿಸಿ ಸನ್ಮಾನಿಸಿ ಗೌರವಿಸಲಾಗುವುದು.
- ಶಿಕ್ಷಕ ಎಂದಿಗೂ ಕಲಿಯುವ ವಿದ್ಯಾರ್ಥಿ. ತರಗತಿಗೂ ಮುನ್ನ ವಿಷಯದ ಬಗ್ಗೆ ಸಿದ್ದತೆ ನಡೆಸಿಕೊಂಡು ಮಕ್ಕಳಿಗೆ ಹೇಳಿಕೊಡಬೇಕು. ನಾವೀನ್ಯ ತಂತ್ರಗಳನ್ನು ಬಳಸಿ ಅರ್ಥವಾಗುವಂತೆ ಮಕ್ಕಳಿಗೆ ಪ್ರೀತಿಯಿಂದ ಪಾಠ ಹೇಳಿಕೊಟ್ಟಲ್ಲಿ ಫಲಿತಾಂಶದಲ್ಲಿ ಹೆಚ್ಚಳ ಕಾಣಬಹುದು.
| ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ
ಅಧ್ಯಕ್ಷತೆ ವಹಿಸಿದ್ದ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಲಾಕ್‍ಡೌನ್‍ನಿಂದ ಶಾಲೆಗಳು ಬಂದ್ ಆದ ಹಿನ್ನೆಲೆಯಲ್ಲಿ ಅನೇಕ ಮಕ್ಕಳು ಬಾಲ್ಯವಿವಾಹಕ್ಕೆ, ಬಾಲ ಕಾರ್ಮಿಕತೆಗೆ ಒಳಗಾಗಿದ್ದಾರೆ. ಬಾಲ್ಯ ವಿವಾಹಗಳಿಂದ ಮಕ್ಕಳನ್ನು ತಡೆಯಲು ಸರ್ಕಾರದ ಕಡೆಯಿಂದ ಹೆಚ್ಚಿನ ಪ್ರಯತ್ನಗಳು ನಡೆದಾಗ್ಯೂ ಬಾಲ್ಯ ವಿವಾಹಗಳು ನಡೆದಿವೆ.
ಯಾವುದೇ ಭದ್ರತೆ ಇಲ್ಲದೆಂತೆ ಮಕ್ಕಳಿಗೆ ಕೆಲಸದಲ್ಲಿ ತೊಡಗಿಸಿದ್ದೂ ಕಂಡು ಬಂದಿದೆ. ಇನ್ನು ಮುಂದೆ ಹೀಗಾಗಬಾರದು. ಈ ನಿಟ್ಟಿನಲ್ಲಿ ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸವನ್ನು ಶಿಕ್ಷಕರು ಮಾಡುತ್ತಿದ್ದಾರೆ. ಶಾಲೆಗೆ ಬರಲು ಒಪ್ಪದಿರುವ ಪ್ರಕರಣಗಳಿದ್ದರೆ ನಮ್ಮ ಗಮನಕ್ಕೆ ತರಬೇಕು ಎಂದರು.
ಶಿಕ್ಷಕರು ವಿದ್ಯಾಗಮ ಕಾರ್ಯಕ್ರಮ ಮೂಲಕ ಶಾಲಾ ಆವರಣ, ಶಾಲೆ ಕಟ್ಟೆ, ಮರಗಳ ಕೆಳಗೆ ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದಾರೆ. ಶಿಕ್ಷಕರ ಪರಿಣಾಮಕಾರಿ ಪಾಲ್ಗೊಳ್ಳುವಿಕೆ ಇಲ್ಲದೇ ಫಲಿತಾಂಶ ಉತ್ತಮವಾಗಿ ಬರಲು ಸಾಧ್ಯವಿಲ್ಲ. ಸಮಾಜ ಬದಲಾವಣೆಯಲ್ಲಿ ಮಕ್ಕಳ ಪಾತ್ರ ಮುಖ್ಯವಾಗಿದ್ದು, ಅಂತಹ ಮಕ್ಕಳಲ್ಲಿ ಶಿಕ್ಷಕರು ಉತ್ತಮ ಶಿಕ್ಷಣವನ್ನು ಬಿತ್ತಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಹ ನಿರ್ದೇಶಕರು ಮತ್ತು ಚಿತ್ರದುರ್ಗದ ಸಿಟಿಇ ಪ್ರಾಂಶುಪಾಲರಾದ ಹೆಚ್.ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಆಡಳಿತ ಮತ್ತು ಅಭಿವೃದ್ದಿ ವಿಭಾಗದ ಡಿಡಿಪಿಐ ಇಬ್ಬರೂ ಸಹಯೋಗ ಮತ್ತು ಸಹಕಾರದೊಂದಿಗೆ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜಿಲಾಧಿಕಾರಿ ನೀಡಿರುವ ಆದೇಶದಂತೆÉ ಮುಖ್ಯೋಪಾಧ್ಯಾಯರಿಗೆ ತಾಲ್ಲೂಕು ಕೇಂದ್ರಗಳು ಮತ್ತು ಶಾಲೆಗಳಲ್ಲಿಯೇ ಸಭೆ ನಡೆಸಿ ಈ ವರ್ಷದ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ಮಾರ್ಗದರ್ಶನ ಮಾಡುತ್ತೇವೆ ಎಂದರು.
ಸಭೆಯಲ್ಲಿ ಪಾಲ್ಗೊಂಡ ಮುಖ್ಯೋಪಾಧ್ಯಯರಿಗೆ ಈ ಸಭೆಯು ಉಪಯುಕ್ತವಾಗಿದ್ದು, ಕನಿಷ್ಠ ಅವಧಿಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಬೋಧಿಸಿ ಸಂಕಷ್ಟದ ಸ್ಥಿತಿಯಲ್ಲಿ ಉತ್ತಮ ಫಲಿತಾಂಶವನ್ನು ಗಳಿಸಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.
ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ.100 ಫಲಿತಾಂಶ ಪಡೆದ ಹರಿಹರ ತಾಲ್ಲೂಕಿನ ಬೆಳವನೂರಿನ ಮಾಗನೂರು ಬಸಪ್ಪ ಪ್ರೌಢಶಾಲೆಯ(ಅನುದಾನಿತ) ಮುಖ್ಯೋಪಾಧ್ಯಾಯಿನಿ ಸ್ವಪ್ನ.ಯು ಮಾತನಾಡಿ, ಕಳೆದ ವರ್ಷ ನಮ್ಮ ಶಾಲೆಯಲ್ಲಿ ಶೇ.100 ರಷ್ಟು ಉತ್ತಮ ಫಲಿತಾಂಶ ಬರಲು ಶಿಕ್ಷಕರ ಸಹಕಾರ ಹಾಗೂ ನಿವೃತ್ತ ಮುಖ್ಯೋಪಾಧ್ಯಯರ ಮಾರ್ಗದರ್ಶನ ಕಾರಣವಾಗಿದೆ.
ಹಾಗೂ ಶಾಲೆಯಲ್ಲಿ ಸ್ನೇಹಮಯ ವಾತಾವರಣ, ಹಾಜರಾತಿ ನಿರ್ವಹಣೆ, ಅಂದಿನ ತರಗತಿಯ ಪಠ್ಯಗಳನ್ನು ಪುನರ್ ಮನನ ಮಾಡುವುದು ಮತ್ತು ಮಕ್ಕಳ ಬಗ್ಗೆ ಪ್ರೀತಿ-ಕಾಳಜಿ ಉತ್ತಮ ಫಲಿತಾಂಶಕ್ಕೆ ಸಹಕಾರಿಯಾಗಿತ್ತು. ಈ ಬಾರಿ ಆನ್‍ಲೈನ್ ಪಾಠಗಳು, ವಿದ್ಯಾರ್ಥಿಗಳ ಮನೆ-ಮನೆ ಭೇಟಿ, ಸರಣಿ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಜವಾಬ್ದಾರಿಯು ಮತ್ತಷ್ಟು ಹೆಚ್ಚಾಗಿದ್ದು ಉತ್ತಮ ಫಲಿತಾಂಶವನ್ನು ಇದೇ ರೀತಿ ತರುತ್ತೇವೆ ಎಂದು ಭರವಸೆ ನೀಡಿದರು.
ಜಗಳೂರು ತಾಲ್ಲೂಕಿನ ಹಿರೇಮಗಳೂರಿನ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕರು ಮಾತನಾಡಿ, ನಮ್ಮ ಶಾಲೆಯಲ್ಲಿ 23 ವಿದ್ಯಾರ್ಥಿಗಳಿದ್ದು ಶಿಕ್ಷಕರು ಅವರನ್ನು ಸಮಾನವಾಗಿ ದತ್ತು ಪಡೆದು ಸಂಪೂರ್ಣ ಫಲಿತಾಂಶದ ಜವಾಬ್ದಾರಿಯನ್ನು ಹೊತ್ತಿದ್ದರು. ಶಾಲೆಗೆ ಬಾರದ ವಿದ್ಯಾರ್ಥಿಗಳ ಮನೆಗೆ ಹೋಗಿ ಪೋಷಕರಿಗೆ ಶಿಕ್ಷಣದ ಮಹತ್ವವನ್ನು ತಿಳಿಸಿ ಶಾಲೆಗೆ ಕರೆತರುವ ಕೆಲಸ ಯಶಸ್ವಿಯಾಗಿದ್ದು, ಅಂದಿನ ತರಗತಿಯ ಪಠ್ಯ ಕ್ರಮವನ್ನು ಗುಂಪು ಸಂವಹನದಲ್ಲಿ ಮಕ್ಕಳೊಂದಿಗೆ ಚರ್ಚಿಸುತ್ತಿದ್ದರು.
ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಶೈಕ್ಷಣಿಕ ಮಟ್ಟವನ್ನು ವೃದ್ಧಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಹಾಗೂ ಪೋಷಕರು, ಶಿಕ್ಷಕರು ಮತ್ತು ಮಕ್ಕಳ ಸಹಕಾರದೊಂದಿಗೆ ಶೇ.100 ರಷ್ಟು ಫಲಿತಾಂಶ ಗಳಿಸಲು ಸಾಧ್ಯವಾಯಿತು ಎಂದರು.
ಡಯಟ್ ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಕೆ.ಲಿಂಗರಾಜು ಮಾತನಾಡಿ, ಶಿಕ್ಷಕರಂತೆ ವಿದ್ಯಾರ್ಥಿಗಳು ಎನ್ನುವಂತೆ ಶಿಕ್ಷಕರು ವಿದ್ಯಾರ್ಥಿಗಳನ್ನು ಅರ್ಥಮಾಡಿಕೊಂಡು ಉತ್ತಮವಾಗಿ ಕಲಿಸಿದರೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ನೀಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕೆಂದರು.
ಹರಿಹರದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಸವರಾಜಪ್ಪ ಮಾತನಾಡಿ, ತುಂಬಾ ಚೆನ್ನಾಗಿ ಓದುವ ಮಕ್ಕಳಿಗೇ ಹೆಚ್ಚು ಪ್ರಾಮುಖ್ಯತೆ ನೀಡದೇ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ವೈಯಕ್ತಿಕವಾಗಿ ಮಾತನಾಡಿಸಿ, ಆ ಮಗುವಿನ ಹಿನ್ನೆಲೆ ತಿಳಿದು ಅಗತ್ಯ ಸಹಾಯ-ಸಹಕಾರ ನೀಡಿ ಆ ಮಗವೂ ಉತ್ತಮ ಫಲಿತಾಂಶ ಪಡೆಯುವಂತೆ ಶಿಕ್ಷಕರು ಮಾಡಬೇಕೆಂದರು.
ಸಂಗೀತ ಶಿಕ್ಷಕ ಅಜಯನಾರಾಯಣ ಪ್ರಾರ್ಥಿಸಿದರು. ಡಿಡಿಪಿಐ(ಆಡಳಿತ) ಸಿ.ಆರ್.ಪರಮೇಶ್ವರಪ್ಪ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ, ಎಂ.ನಿರಂಜನಮೂರ್ತಿ, ಜಿ.ಕೊಟ್ರೇಶ್, ರಾಜೀವ್, ವೆಂಕಟೇಶ್, ಜಿಲ್ಲಾ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಡಿ.ಡಿ.ಹಾಲಪ್ಪ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥಯ್ಯ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ4 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



