ದಿನದ ಸುದ್ದಿ
ಹಾಲ್ ಟಿಕೆಟ್ ಕೊಡದಕ್ಕೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಆತ್ಮಹತ್ಯೆ
ಸುದ್ದಿದಿನ, ಬೆಂಗಳೂರು : ಹಾಲ್ ಟಿಕೆಟ್ ಕೊಡದಕ್ಕೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಜನಾರ್ದನ್ (15), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯ ಹಾಜರಾತಿ ಕಡಿಮೆ ಇದ್ದ ಕಾರಣ ಹಾಲ್ ಟಿಕೆಟ್ ನಿರಾಕರಿಸಿತ್ತು ಶಾಲೆ.ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿ
ನಿನ್ನೆ(ಭಾನುವಾರ) ನಾಗವಾರ ಪಾಳ್ಯದ ತಮ್ಮ ನಿವಾಸದಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಕ್ಷಣವೇ ಬೌರಿಂಗ್ ಆಸ್ಪತ್ರೆಗೆ ವಿದ್ಯಾರ್ಥಿಯನ್ನು ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ್ದದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401