ದಿನದ ಸುದ್ದಿ

ಪರಿಶಿಷ್ಟ ವರ್ಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಆನ್‍ಲೈನ್ ಅರ್ಜಿ ಆಹ್ವಾನ

Published

on

ಸುದ್ದಿದಿನ, ಬೆಂಗಳೂರು : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2019ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ. 60 ರಿಂದ ಶೇ 74.99% ರವರೆಗೆ ಮತ್ತು ಶೇ.75% ಕ್ಕೂ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ವರ್ಗದ ಪ್ರತಿ ವಿದ್ಯಾರ್ಥಿಗೆ ರೂ. 7,000/- ಹಾಗೂ ರೂ. 15,000/-ಗಳ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ www.tw.kar.nic.in ಮೂಲಕ ಡಿಸೆಂಬರ್ 31 ರೊಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version