ದಿನದ ಸುದ್ದಿ
ಎಸ್ ಎಸ್ ಎಲ್ ಸಿ ರಿಸಲ್ಟ್ : 625 ಅಂಕಗಳಿಗೆ 625 ಅಂಕ ಪಡೆದು ರಾಜ್ಯಕ್ಕೇ ಟಾಪರ್..!
ಸುದ್ದಿದಿನ, ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಒಟ್ಟು 625 ಅಂಕಗಳಿಗೆ ಇಬ್ಬರು ವಿದ್ಯಾರ್ಥಿನಿಯರು 625 ಅಂಕಗಳನ್ನು ಪಡೆದು ರಾಜ್ಯಕ್ಕೇ ರಾಂಕ್ ಬಂದು ಕೀರ್ತಿ ತಂದಿದ್ದಾರೆ.
ಆನೇಕಲ್ ತಾಲೂಕಿನ ಅತ್ತಿಬೆಲೆಯ ಶಾಲೆಯಾದ ಸೇಂಟ್ ಫಿಲೋಮಿನಾ ಇಂಗ್ಲೀಷ್ ಹೈ ಸ್ಕೂಲ್ ನ ವಿದ್ಯಾರ್ಥಿನಿ ಸೃಜನಾ.ಡಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೊಲಬ ವಿಥೋಬ್ ಶಾನಭಾಗ್ ಕಲ್ಚರಲ್ ಹೈಸ್ಕೂಲಿನ ವಿದ್ಯಾರ್ಥಿನಿ ನಾಗಾಂಜಲಿ ಪರಮೇಶ್ವರ್ ನಾಯಕ್ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ಹಾಗೆರ 11 ವಿದ್ಯಾರ್ಥಿಗಳು 624 ಅಂಕಗಳು, 19 ವಿದ್ಯಾರ್ಥಿಗಳು 623 ಅಂಕಗಳು, 43 ವಿದ್ಯಾರ್ಥಿಗಳು 621 ಅಂಕಣಗಳನ್ನು ಪಡೆದಿದ್ದು, 56 ವಿದ್ಯಾರ್ಥಿಗಳು 620 ಅಂಕಗಳನ್ನು ಪಡೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.
ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ
ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.
ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.
ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಪತ್ರಕರ್ತರಿಗೆ ನಿವೇಶನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ6 days ago
ಮಾಯಕೊಂಡ ಗುಡ್ಡದಹಳ್ಳಿಗೆ ಕೆ.ಎಸ್.ಆರ್.ಟಿ.ಸಿ.ಬಸ್ ಸೌಕರ್ಯ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ7 days ago
ಆತ್ಮಕತೆ | ನಮ್ಮ ಬಿಆರ್ಪಿ ಸ್ನಾತಕೋತ್ತರ ಕೇಂದ್ರ
-
ದಿನದ ಸುದ್ದಿ6 days ago
ಸಮಾಜ ಕಲ್ಯಾಣ ಇಲಾಖೆ : ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿಗೆ ಆರ್ಜಿ ಆಹ್ವಾನ
-
ದಿನದ ಸುದ್ದಿ7 days ago
ನ್ಯಾಮತಿ | ತೂಕ ವಂಚನೆ ; ನ್ಯಾಯಬೆಲೆ ಅಂಗಡಿ ಅಮಾನತಿಗೆ ಡಿಸಿ ಆದೇಶ
-
ದಿನದ ಸುದ್ದಿ6 days ago
ಬಾಲ್ಯ ವಿವಾಹ ತಡೆಗೆ ನೂತನ ಕಾಯ್ದೆ ಜಾರಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್
-
ದಿನದ ಸುದ್ದಿ6 days ago
KPSC | ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ