ದಿನದ ಸುದ್ದಿ

ದಾವಣಗೆರೆ | ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗೊಂದಲ ಪರಿಹಾರಕ್ಕೆ ಸಹಾಯವಾಣಿ : ಕರೆಮಾಡಿ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಮಾರ್ಚ್‍ನಲ್ಲಿ ನಡೆಯಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸರ್ಕಾರ ಜೂ 25 ರಿಂದ ಜುಲೈ 4 ರವರೆಗೆ ನಡೆಸಲು ತಿರ್ಮಾನಿಸಿದ್ದು, ಈ ಬಗ್ಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಗೊಂದಲ, ಆತಂಕ ಇರುವುದರಿಂದ ಎಲ್ಲಾ ಆತಂಕ ಗೊಂದಲಗಳನ್ನು ನಿವಾರಿಸಿಕೊಳ್ಳಲು ಕಚೇರಿ ಹಂತದಲ್ಲಿ ಸಹಾಯವಾಣಿ ತೆರೆಯಲಾಗಿದೆ.

ಈ ಸಹಾಯವಾಣಿಯು ಜೂ.4 ರಿಂದ ಪರೀಕ್ಷೆ ಪ್ರಾರಂಭವಾಗುವವರೆಗೆ ಕಾರ್ಯನಿರ್ವಹಿಸುತ್ತದೆ. ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ..

  • ಉಪನಿರ್ದೇಶಕರ ಕಚೇರಿ ಸಂಖ್ಯೆ: 08192-23107
  • ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಖ್ಯೆ: 08192-242572

ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪೋಷಕರು ಹಾಗೂ ವಿದ್ಯಾರ್ಥಿಗಳು ತಮ್ಮೆಲ್ಲಾ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version