ದಿನದ ಸುದ್ದಿ
ಪರಿಶಿಷ್ಟ ಪಂಗಡದ ಕಾನೂನು ಪದವೀಧರರ ವೃತ್ತಿ ತರಬೇತಿ : ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಆಡಳಿತ ನ್ಯಾಯಧೀಕರಣದಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ವೃತ್ತಿ ಕಾನೂನು ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಜಿಲ್ಲೆಗೆ 8 ಗುರಿ ನಿಗಧಿಪಡಿಸಲಾಗಿದ್ದು ಇಲಾಖೆಯ ವೆಬ್ ಸೈಟ್ https://twd.karnataka.gov.in/ ಮೂಲಕ ಜೂ.18 ರಿಂದ 31 ರವರೆಗೆ ಅರ್ಜಿ ಸಲ್ಲಿಸಿ ಸಲ್ಲಿಸಿದ ಮೂಲ ಪ್ರತಿಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:45, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243