ದಿನದ ಸುದ್ದಿ
ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2019-20 ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಕಾಲೇಜುಗಳಲ್ಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ (ಮಾರ್ಚ್-2020) ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆ ವೆಬ್‍ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ www.tw.kar.nic.in ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243