ದಿನದ ಸುದ್ದಿ

ಎಸ್ ಟಿ ಸಮಾಜಕ್ಕೆ 7.5 ಮೀಸಲಾತಿ ನೀಡುವಂತೆ ಒತ್ತಾಯಿಸಿ ಜೂನ್ 9 ಕ್ಕೆ ಪಾದಯಾತ್ರೆ

Published

on

ಸುದ್ದಿದಿನ,ದಾವಣಗೆರೆ : ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಶ್ರೀಗಳು ನಮ್ಮ ಸಮಾಜದ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ಸರ್ಕಾರಕ್ಕೆ ಒತ್ತಾಯಿಸಲು ಮುಂದಿನ ತಿಂಗಳು ಜೂನ್ 9 ರಂದು ರಾಜನಹಳ್ಳಿಯಿಂದ ರಾಜಧಾನಿವರೆಗೆ ಹಮ್ಮಿಕೊಂಡಿದ್ದಾರೆ.

ನಾಯಕ ಸಮಾಜದ ವಿವಿಧ ಬೇಡಿಕೆಗಳನ್ನು ಒಳಗೊಂಡಂತೆ ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡುವ ಹಾಗೂ ಸಮಾಜದ ಸಂಘಟನೆಯ ದೃಷ್ಟಿಯಿಂದ ಜೂನ್ 09 ರಿಂದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಿಂದ ರಾಜಧಾನಿ ಬೆಂಗಳೂರಿನವರೆಗೆ ಐತಿಹಾಸಿಕ ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version