ದಿನದ ಸುದ್ದಿ

ಸಿಬ್ಬಂದಿ ನೇಮಕಾತಿ ಆಯೋಗ ; ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕ ಪತ್ರ ಅಧಿಕಾರಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಮತ್ತು ಸಿಬಿಐಯಲ್ಲಿ ಇನ್‍ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐ, ಸಿಬಿಎನ್ ನಲ್ಲಿ ಸಬ್‍ಇನ್‍ಸ್ಪೆಕ್ಟರ್, ಅಂಚೆ ಇಲಾಖೆಯಲ್ಲಿ ಇನ್‍ಸ್ಪೆಕ್ಟರ್, ಹಿರಿಯ ಸೆಕ್ರೆಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಗುಮಾಸ್ತ, ಅಂಚೆ ಇಲಾಖೆ ಸಹಾಯಕ, ವಿಂಗಡನೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ https://ssc.gov.in or www.ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 24 ಕೊನೆಯದಿನವಾಗಿರುತ್ತದೆ. 18 ರಿಂದ 27 ವರ್ಷವಯೋಮಾನದವರಾಗಿರಬೇಕು.

ಎಸ್ಸಿ,ಎಸ್ಟಿ,ಒ.ಬಿ.ಸಿ,ಇ.ಎಸ್.ಎಮ್ ಅಭ್ಯರ್ಥಿಗಳಿಗೆ ನಿಯಾಮಾನುಸಾರ ಇತರ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192259446 ಇಲ್ಲಿಗೆ ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version