Connect with us

ದಿನದ ಸುದ್ದಿ

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ | ಇತಿಹಾಸದ ಪುಟಗಳಲ್ಲಿ ಗೆದ್ದವರು-ಸೋತವರು ದಾಖಲಾಗಿದ್ದಾರೆ ; ಆಡಿಕೊಂಡು ನಕ್ಕವರು ದಾಖಲಾಗಿಲ್ಲ : ಡಿಸಿ ಮಹಾಂತೇಶ ಬೀಳಗಿ

Published

on

ಸುದ್ದಿದಿನ,ದಾವಣಗರೆ : ಸರ್ಕಾರಿ ನೌಕರರು ಇಲಾಖೆಗಳಿಂದ ಸಿಗುವ ಸೌಲಭ್ಯವನ್ನು ತೊಂದರೆ, ಅಡೆತಡೆಗಳಿಲ್ಲದೆ ಜನರಿಗೆ ದೊರಕಿಸುವಂತೆ ಕಾರ್ಯ ನಿರ್ವಹಿಸಬೇಕು, ಈ ಮೂಲಕ ಜನಸ್ನೇಹಿ ಆಡಳಿತ ನೀಡಲು ಎಲ್ಲ ಮಟ್ಟದ ಸರ್ಕಾರಿ ನೌಕರರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾವು ನಮ್ಮ ಕೆಲಸವನ್ನು ಸಂತೋಷದಿಂದ ಮಾಡಿದಾಗ ಅದು ನಮಗೆ ತೃಪ್ತಿ ನೀಡುತ್ತದೆ. ಕೇವಲ ಕರ್ತವ್ಯವೆಂದು ಮಾಡತೊಡಗಿದಾಗ ಬೇಸರ ಉಂಟುಮಾಡುತ್ತದೆ. ಸರ್ಕಾರಿ ಕಚೇರಿಗಳಿಗೆ ಬರುವ ಜನರೊಂದಿಗೆ ಅಧಿಕಾರಿಗಳು ಸ್ಪಂದಿಸಿ ಉತ್ತಮ ಸಂವಹನ ನಡೆಸಬೇಕು. ಕಚೇರಿ ಬಿಟ್ಟು ಹೋದರೂ ಕೂಡ ಆ ಸ್ಥಳದಲ್ಲಿ ನಿಮ್ಮದೇ ಉತ್ತಮ ಛಾಪು ಮೂಡಿಸುವಂತೆ ಕಾರ್ಯ ನಿರ್ವಹಿಸಬೇಕು. ಇತಿಹಾಸದ ಪುಟಗಳಲ್ಲಿ ಗೆದ್ದವರು ಮತ್ತು ಸೋತವರು ಮಾತ್ರ ದಾಖಲಾಗಿದ್ದಾರೆ ಆದರೆ ನೋಡಿಕೊಂಡು ನಕ್ಕವರು, ಆಡಿಕೊಂಡು ಮಾತನಾಡಿದವರು ಯಾರು ಕೂಡ ದಾಖಲಾಗಿಲ್ಲ.

ಹಾಗಾಗಿ ನಾವುಗಳು ಕೂಡ ಚರಿತ್ರೆಯಲ್ಲಿ ಒಳ್ಳೆಯ ಹೆಸರಿನೊಂದಿಗೆ ದಾಖಲಾಗುವಂತಹ ಮಹತ್ಕಾರ್ಯಗಳನ್ನು ಮಾಡಬೇಕು. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಗ್ರೂಪ್-ಡಿ ಸಿಬ್ಬಂದಿಯಿಂದ ಮೊದಲುಗೊಂಡು ಎಲ್ಲ ಹಂತದ ಅಧಿಕಾರಿಗಳು, ಜಿಲ್ಲಾಧಿಕಾರಿವರೆಗಿನ ಎಲ್ಲರೂ ಉತ್ತಮವಾಗಿ ಕೆಲಸ ಮಾಡುವ ಮೂಲಕ ರಾಜ್ಯದಲ್ಲಿ ಜಿಲ್ಲೆಗೆ ಉತ್ತಮ ಹೆಸರು ತಂದುಕೊಟ್ಟರು. ಸರ್ಕಾರಿ ನೌಕರರಾದ ನಾವೆಲ್ಲಾ ಇರುವುದು ಜನರಿಗಾಗಿ ಎಂಬುದನ್ನು ಮರೆಯಬಾರದು.

ಜನಸ್ನೇಹಿ, ಜನಮುಖಿ ಆಡಳಿತ ನೀಡಲು ನೌಕರರು ಬದ್ಧರಾಗಿರಬೇಕು. ಉತ್ತಮ ಪುಸ್ತಕಗಳನ್ನು ಓದಿ ದೊಡ್ಡ ದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಹುದ್ದೆಯನ್ನು ಪಡೆದುಕೊಂಡ ನಂತರದಲ್ಲಿ ಎಲ್ಲವನ್ನು ಮರೆತು ಬೀಗುವಂತಾಗಬಾರದು ಎಂದು ನೌಕರರಿಗೆ ಜಿಲ್ಲಾಧಿಕಾರಿಗಳು ಕಿವಿಮಾತು ಹೇಳಿದರು.

ನಿವೃತ್ತ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಜನಸ್ನೇಹಿ ಆಡಳಿತದ ಕುರಿತು ಉಪನ್ಯಾಸ ನೀಡಿ, ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ನೌಕರರು ಸಲ್ಲಿಸಿದ ಸೇವೆ ಗಣನೀಯವಾದದ್ದು. ಕೊರೋನಾ ಪರಿಸ್ಥಿತಿಯಲ್ಲಿ ಸರ್ಕಾರಿ ನೌಕರರು ತುಸು ನೆಮ್ಮದಿಯಿಂದ ಬದುಕಲು ಭಾರತದ ಸಂವಿಧಾನ ಒದಗಿಸಿಕೊಟ್ಟ ಸೇವಾ ಭದ್ರತೆಯೇ ಕಾರಣ. ಸರ್ಕಾರಿ ನೌಕರರು ನಡತೆ ನಿಯಮಗಳಲ್ಲಿನ 38 ನಿಯಮಗಳನ್ನು ಅಳವಡಿಸಿಕೊಂಡರೆ ಸಾಕು ಜನಸ್ನೇಹಿ ಆಡಳಿತ ನೀಡಲು ಸಾಧ್ಯ.

ನೌಕರರು ಸ್ಪಂದನಾಶೀಲತೆಯನ್ನು ಹೊಂದಿರಬೇಕು. ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆಯನ್ನು ಎಂದಿಗೂ ಬಿಡಬಾರದು. ನೌಕರರು ತಮ್ಮ ಕುಟುಂಬವನ್ನು ಕೂಡ ನಿರ್ವಹಣೆ ಮಾಡಿಕೊಂಡು ಹೋಗಬೇಕು, ಆಡಳಿತದ ಮೇಲೆ ಹೆಚ್ಚು ಗಮನ ವಹಿಸಿ ಕುಟುಂಬವನ್ನು ನಿರ್ಲಕ್ಷಿಸಬಾರದು. ಆಡಳಿತ ಮತ್ತು ಕುಟುಂಬ ಎರಡನ್ನೂ ಸಮಾನವಾಗಿ ನಿರ್ವಹಣೆ ಮಾಡಬೇಕು. ಆಡಳಿತದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಕುತೂಹಲ ನೌಕರರಿಗೆ ಇರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅನನ್ಯ ಸೇವೆ ಸಲ್ಲಿಸಿದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಕುಂಬಳೂರು ಮುಖ್ಯ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ, ದಾವಣಗೆರೆ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಕೊಟ್ರೇಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಉಮೇಶ್ ಡಿ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಟಿ ಪ್ರಕಾಶ್, ಮಲೇಬೆನ್ನೂರು ಉಪ ತಹಶೀಲ್ದಾರ್ ಆರ್.ರವಿ, ಕೈದಾಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯಾವತಿ ಐ.ಸಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆರ್.ಲೋಕೇಶ್, ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಸುಮಿತ್ರ ಎನ್.ಹೆಗಡೆ ಇವರುಗಳಿಗೆ 2020-21 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

2021-22 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ನಟರಾಜ ಕಕ್ಕುಪ್ಪಿ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ಶಶಿಧರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್‍ಕುಮಾರ್ ಕೆ.ಹೆಚ್, ಭೂದಾಖಲೆಗಳ ಕಚೇರಿಯ ಸಹಾಯಕ ನಿರ್ದೇಶಕ ಲೋಹಿತ್ ಟಿ.ಕೆ, ಜಿಲ್ಲಾಧಿಕಾರಿಗಳ ಕಚೇರಿ ದ್ವಿತೀಯ ದರ್ಜೆ ಸಹಾಯಕ ಎಂ.ಪ್ರಭಾಕರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಹೆಚ್.ಉಮಾಪತಿ, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಶೀಘ್ರಲಿಪಿಗಾರರಾದ ರೇಖಾ.ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಕೇಶವಮೂರ್ತಿ.ಎನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಶೀಘ್ರಲಿಪಿಗಾರರಾದ ಲಕ್ಷ್ಮೀದೇವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡಿ.ದರ್ಜೆ ನೌಕರರಾದ ಬಸವರಾಜಪ್ಪ ಬಿ.ಎಸ್ ಇವರುಗಳಿಗೆ ನೀಡಿ ಸನ್ಮಾನಿಸಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಪ್ರಾರಂಭದಲ್ಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಏ. 21 ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, ಕಳೆದ ವರ್ಷವೇ ಸಮಾರಂಭ ಆಯೋಜಿಸಬೇಕಾಗಿತ್ತು. ಆದರೆ ಕೋವಿಡ್ ಕಾರಣಕ್ಕಾಗಿ ಆಚರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ 2020-21 ಹಾಗೂ 21-22 ನೇ ಸಾಲಿಗೆ ಒಟ್ಟು 18 ಜನ ಅಧಿಕಾರಿ, ಸಿಬ್ಬಂದಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಈ ವರ್ಷ ನೀಡಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಆರ್.ಗೋಪಿನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎ.ಆರ್ ಉಜ್ಜನಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ತಾಲ್ಲೂಕು ಘಟಕಗಳ ಅಧ್ಯಕ್ಷರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending