ದಿನದ ಸುದ್ದಿ
ರಾಜ್ಯ ಸರ್ಕಾರ ಆದೇಶ | ಕೊರೋನಾದಿಂದ ಸತ್ತವರ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಿ ; ಅಸ್ಪತ್ರೆ ಬಾಕಿ ಬಿಲ್ ಕಟ್ಟುವಂತೆ ಒತ್ತಾಯಿಸ ಬೇಡಿ, ಇಲ್ಲದಿದ್ದರೆ ಅಸ್ಪತ್ರೆ ನೋಂದಣಿ ರದ್ದು..!
ಸುದ್ದಿದಿನ, ಬೆಂಗಳೂರು : ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸದೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸ ಬೇಕು ಇಲ್ಲದಿದ್ದರೆ ಅಸ್ಪತ್ರೆಯ ನೋಂದಣಿಯನ್ನು ರದ್ದು ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
131 ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಸೋಂಕಿತರು ಮೃತಪಟ್ಟಲ್ಲಿ, ಆಸ್ಪತ್ರೆಯಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತನ್ನು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಇದನ್ನೂ ಓದಿ | ಈ ಸಮಯದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
ಆದರೆ, ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ (ಕೆಪಿಎಂಇ), 2007 ಭಾಗ 11 (1) ಉಪ ಷರತ್ತು (vi) ರ ಅನ್ವಯ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸುವಂತಿಲ್ಲ / ಒತ್ತಡ ಹೇರುವಂತಿಲ್ಲ ಹಾಗೂ ಬಿಲ್ ಪಾವತಿ ಮಾಡದೆ ಇದ್ದ ಪಕ್ಷದಲ್ಲಿ ಮೃತದೇಹದ ಹಸ್ತಾಂತರ ಮಾಡಲು ನಿರಾಕರಿಸುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.
ಆದ್ದರಿಂದ, ಇಂತಹ ಪ್ರಕರಣಗಳು ವರದಿಯಾದಲ್ಲಿ ಕೆಪಿಎಂಇ ಕಾಯ್ದೆಯ ನಿಯಮಾನುಸಾರ ಸದರಿ ಆಸ್ಪತ್ರೆಯ ನೋಂದಣಿಯನ್ನು ರದ್ದುಗೊಳಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು (ಅಧ್ಯಕ್ಷರು ಕೆಪಿಎಂಇ) ಇವರು ಕಾರ್ಯಪ್ರವೃತ್ತರಾಗಲು ಸೂಚಿಸಿದೆ. ಮುಂದುವರೆದು, ಈ ರೀತಿ ವರದಿಯಾದ ಪ್ರಕರಣಗಳ ಮಾಹಿತಿ ಹಾಗೂ ಕೈಗೊಂಡ ಕ್ರಮಗಳ ಕುರಿತು ವಾರಕ್ಕೆ ಒಂದು ಬಾರಿ, ರಾಜ್ಯ ಮಟ್ಟಕ್ಕೆ ವರದಿ ಸಲ್ಲಿಸಲು ಆದೇಶಿಸಿದೆ ಎಂದು ಹೇಳಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243