Connect with us

ದಿನದ ಸುದ್ದಿ

ರೈತರಿಗೆ ಸಿಹಿಸುದ್ದಿ; ಋಣಭಾರ ಪೀಡಿತರಿಗೆ ಕಿರುಕುಳ ತಡೆಯಲು ಸೂಚನೆ

Published

on

ಸುದ್ದಿದಿನ ಡೆಸ್ಕ್: ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗುವಂಥ ಕಾನೂನು ಅನುಷ್ಠಾನಕ್ಕೆ ಮುಂದಾಗಿದ್ದು, ಋಣಭಾರ ಪೀಡಿತ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಕ್ರಮ ವಹಿಸಲು ಎಲ್ಲಾ ಪ್ರಾದೇಶಿಕ ಆಯುಕ್ತರು, ಎಲ್ಲಾ ವಲಯಗಳ ಪೊಲೀಸ್ ಮಹಾನಿರೀಕ್ಷಕರು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

ಋಣಭಾರ ಪೀಡಿತ ಎಲ್ಲ ವರ್ಗದ ಜನರ ಮೇಲೆ ಲೇವಾದೇವಿಗಾರರಿಂದ ಕಾನೂನು ಬಾಹಿರ ಒತ್ತಡಗಳು ಹೇರುತ್ತಿರುವ ವರದಿಯಾಗುತ್ತಿದ್ದು, ಇದರ ತಡೆಗಾಗಿ ಕರ್ನಾಟಕ ಋಣಭಾರ ಪರಿಹಾರ ಮಸೂದೆ ೨೦೧೮ನ್ನು ಮಂಡಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ರಾಜ್ಯದ ಋಣಭಾರ ಪೀಡಿತ ಸಣ್ಣ ಭೂರಹಿತ ರೈತ, ಕೃಷಿ ಕಾರ್ಮಿಕರು, ದುರ್ಬಲ ವರ್ಗದವರಿಗೆ ಋಣಭಾರ ಸಮಸ್ಯೆಗಳ ಪರಿಹಾರಕ್ಕಾಗಿ ಮಸೂದೆ ಮಂಡಿಸಲು ಪರಿಶೀಲನೆ ನಡೆಸುತ್ತಿದೆ.

ಸಾಲ ಪಡೆದವರ ಮೇಲೆ ಯಾವುದೇ ರೀತಿಯ ಕಾನೂನು ಬಾಹಿರ ಒತ್ತಡ, ದೌರ್ಜನ್ಯ ಎಸಗದಂತೆ ತಡೆಗಟ್ಟಲು ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶದಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

 

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

Published

on

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

Published

on

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಪ್ರಶಸ್ತಿಯು 51 ಸಾವಿರ ರೂಪಾಯಿ ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

Published

on

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಮಿತಿ ಅನುಮೋದಿಸಿದೆ.

ಸಾಮಾನ್ಯ ದರ್ಜೆ ಭತ್ತಕ್ಕೆ ಕ್ವಿಂಟಲ್‌ಗೆ 2 ಸಾವಿರದ 40 ರೂಪಾಯಿಯಿಂದ 2ಸಾವಿರದ 183 ರೂಪಾಯಿಗೆ ಹಾಗೂ ’ಎ’ ದರ್ಜೆ ಭತ್ತಕ್ಕೆ 2 ಸಾವಿರದ 60 ರಿಂದ 2 ಸಾವಿರದ 203 ರೂಪಾಯಿಗೆ ಹೆಚ್ಚಿಸಲಾಗಿದೆ.

ರಾಗಿಗೆ ಪ್ರತಿ ಕ್ವಿಂಟಲ್‌ಗೆ 3 ಸಾವಿರದ 578 ರೂಪಾಯಿಯಿಂದ 3 ಸಾವಿರದ 846 ರೂಪಾಯಿಗೆ ಹೆಚ್ಚಿಸಲಾಗಿದೆ. ತೊಗರಿಗೆ ಪ್ರತಿ ಕ್ವಿಂಟಲ್‌ಗೆ 6 ಸಾವಿರದ 600 ರಿಂದ 7 ಸಾವಿರ ರೂಪಾಯಿಗೆ, ಹೆಸರು ಕಾಳಿಗೆ ಪ್ರತಿ ಕ್ವಿಂಟಲ್‌ಗೆ 7 ಸಾವಿರದ 755 ರಿಂದ 8 ಸಾವಿರದ 558 ರೂಪಾಯಿಗೆ, ಪ್ರತಿ ಕ್ವಿಂಟಲ್ ಉದ್ದಿಗೆ 6 ಸಾವಿರದ 600 ರಿಂದ 6 ಸಾವಿರದ 950 ರೂಪಾಯಿಗೆ ಹೆಚ್ಚಿಸಲಾಗಿದೆ.

ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ 2022-23ನೇ ಸಾಲಿಗೆ 330.5 ದಶಲಕ್ಷ ಟನ್‌ನಷ್ಟು ಆಹಾರ ಧಾನ್ಯ ಉತ್ಪಾದನೆ ಅಂದಾಜಿಸಲಾಗದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending