ದಿನದ ಸುದ್ದಿ

ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣ : ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಸುದ್ದಿದಿನ ಡೆಸ್ಕ್ : ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕೆ ಮತ್ತು ಐಟಿ-ಬಿಟಿ ಸಚಿವರು ಹೆಚ್ಚಿನ ಕಾಳಜಿ ವಹಿಸಿ, ಕೈಗಾರಿಕೋದ್ಯಮಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನೆಡೆಯುತ್ತಿದ್ದಾರೆ ಎಂದರು.

ಕೈಗಾರಿಕೋದ್ಯಮಿಗಳು ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಿರುವುದು ಮತ್ತು ಬಂಡವಾಳ ಹೂಡಲು ಆಸಕ್ತಿ ತೋರುತ್ತಿಲ್ಲ ಎಂಬ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಉಪ ಮುಖ್ಯಮಂತ್ರಿ ಸ್ಟಷ್ಟಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version