ರಾಜಕೀಯ
ಬೆಳಗಾವಿ ಸುವರ್ಣಸೌಧದಲ್ಲಿ ಇದೇ 19 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ : ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ
ಸುದ್ದಿದಿನ ಡೆಸ್ಕ್ : ಬೆಳೆಗಾವಿಯ ಸುವರ್ಣಸೌಧದಲ್ಲಿ ಇದೇ ತಿಂಗಳ 19ರಿಂದ 30 ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಇಂದು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳೊಂದಿಗೆ ಚರ್ಚಿಸಿ, ನಿರ್ದೇಶನ ನೀಡಲಾಗಿದೆ ಎಂದರು.
ಈ ಅಧಿವೇಶನದಲ್ಲಿ 6 ಮಸೂದೆಗಳನ್ನು ತರಲಾಗುತ್ತಿದೆ. ಇದರಲ್ಲಿ ಎರಡು ಮಸೂದೆಗಳನ್ನು ಈಗಾಗಲೇ ಮಂಡಿಸಲಾಗಿದ್ದು, ಅವುಗಳ ಬಗ್ಗೆ ಚರ್ಚಿಸಿ, ಅಂಗೀಕರಿಸುವ ಪ್ರಕ್ರಿಯೆ ನಡೆಯಲಿದೆ. ಇದಲ್ಲದೆ, 4 ಹೊಸ ವಿಧೇಯಕಗಳು ಬರಲಿವೆ. ಅಧಿವೇಶನದಲ್ಲಿ ಸಮಗ್ರ ಕರ್ನಾಟಕದ ಜತೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಸೂಕ್ತ ದಿನಗಳನ್ನು ನಿಗದಿಪಡಿಸಲಾಗುವುದು ಎಂದು ವಿಶ್ವೇಶ್ವರ ಕಾಗೇರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243