ದಿನದ ಸುದ್ದಿ

ದೇಶದ ವೈಮಾನಿಕ ವಲಯದಲ್ಲಿ ಮಹಿಳಾ ಪೈಲಟ್‌ಗಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ : ಸಚಿವ ಜ್ಯೋತಿರಾದಿತ್ಯಾ ಸಿಂಧಿಯಾ

Published

on

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಮಹಿಳಾ ಪೈಲಟ್‌ಗಳೂ ಸೇರಿದಂತೆ ಒಟ್ಟಾರೆ ಪೈಲಟ್‌ಗಳ ಸಂಖ್ಯೆ ಹೆಚ್ಚಿಸಲು ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯಾ ಸಿಂಧಿಯಾ ತಿಳಿಸಿದ್ದಾರೆ.

ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು, ಪೈಲಟ್‌ಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕದ ಬೆಳಗಾವಿ ಮತ್ತು ಕಲಬುರಗಿ ಸೇರಿದಂತೆ 5 ವೈಮಾನಿಕ ತರಬೇತಿ ಸಂಸ್ಥೆಗಳಿಗೆ ಈಗಾಗಲೇ ಅನುಮತಿ ನೀಡಲಾಗಿದೆ ಎಂದರು.

ಅಂತಾರಾಷ್ಟ್ರೀಯ ಮಹಿಳಾ ಏರ್‌ಲೈನ್ ಸೊಸೈಟಿ ವರದಿ ಅನುಸಾರ ಜಾಗತಿಕವಾಗಿ ಒಟ್ಟು ಪೈಲಟ್‌ಗಳಲ್ಲಿ ಮಹಿಳಾ ಪೈಲಟ್‌ಗಳು ಶೇಕಡ ೫ರಷ್ಟಿದ್ದು, ಭಾರತದಲ್ಲಿ ಈ ಪ್ರಮಾಣ ಶೇಕಡ 15ರಷ್ಟಿದೆ. ಈ ಮೂಲಕ ಜಾಗತಿಕ ಸರಾಸರಿಗಿಂತಲೂ ಭಾರತದ ಸ್ಥಿತಿ ಉತ್ತಮವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಜಲಗಾವ್, ಕಜುರಾಹೊ ಮತ್ತು ಲೀಲಾಬರಿ ವೈಮಾನಿಕ ತರಬೇತಿ ಸಂಸ್ಥೆಗಳಿಗೆ ಅನುಮತಿ ನೀಡಲಾಗಿದ್ದು, ಎರಡನೇ ಹಂತದಲ್ಲಿ ಹುಬ್ಬಳ್ಳಿ, ಕಡಪ, ಕಿಶನ್‌ಗಢ, ಭಾವನಗರ್ ಮತ್ತು ಸೇಲಂ ವೈಮಾನಿಕ ತರಬೇತಿ ಸಂಸ್ಥೆಗಳಿಗೆ ಅನುಮತಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version