ದಿನದ ಸುದ್ದಿ
ಸ್ಟಾಕ್ ಮಾರ್ಕೇಟ್ 17.75 ಲಕ್ಷ ವಂಚನೆ, ಒಬ್ಬನ ಬಂಧನ ; 5 ಲಕ್ಷ ಜಪ್ತಿ !
- ಗಿರೀಶ್ ಕುಮಾರ್,ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ಸೈಬರ್, ಆರ್ಥಿಕ, ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆ, ಬಳ್ಳಾರಿ ಕಾರ್ಯಚರಣೆ ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ವ್ಯಕ್ತಿಯಿಂದ ನಗದು ಹಣ ರೂಪಾಯಿ 5 ಲಕ್ಷ ಜಪ್ತಿ ಮಾಡಿರುವ ಘಟನೆ ಗಣಿನಾಡು ಬಳ್ಳಾರಿಯಲ್ಲಿ ನಡೆದಿದೆ.
ಕು. ಲಕ್ಷ್ಮೀ ವಿ.ಎಸ್ ತಂದೆ ವಿ. ಟಿ ಸತ್ಯನಾರಾಯಣ ವಾಸ: ಬಳ್ಳಾರಿ ರವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ವಾಸಿಯಾದ ರಂಜಿತ ಎಂಬುವವರು ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ಹೇಳಿ ನಂಬಿಸಿ ಪಿರ್ಯಾದಿದಾರರಿಂದ ಹಣ ರೂ. 17,75,865 ಆನ್‌ಲೈನ್ ಮೂಲಕ ಹಾಕಿಸಿಕೊಂಡು ಮೋಸ ಮಾಡಿರುತ್ತಾನೆ. ಆದರೆ 5 ಲಕ್ಷ ಮಾತ್ರ ರಿಕವರಿ, ಉಳಿದ ಹಣ ಎಲ್ಲಿಗೆ ಹೋಗಿದೆ.
ಪೊಲೀಸ್ ಅಧೀಕ್ಷಕಿ ಡಾ: ಶೋಭಾರಾಣಿ ವಿ.ಜೆ ಅವರ ಬಳ್ಳಾರಿ ಮಾರ್ಗದರ್ಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ನೇತೃತ್ವದಲ್ಲಿ, ಬಳ್ಳಾರಿ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಡಿಎಸ್‌ಪಿ ಡಾ: ಸಂತೋಷ ಚೌವ್ಹಾಣ್ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಣೆ ಮಾಡಿಸಿ ತನಿಖೆ ಕೈಗೊಂಡು, ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ವಲಿಬಾಷ ಮತ್ತು ಸಿಬ್ಬಂದಿಯ ತಿಪ್ಪೇರುದ್ರ ಎಎಸ್‌ಐ, ಸುರೇಶ, ಉಮಾಮಹೇಶ್ವರ, ಕೆ. ಯಲ್ಲೇಶ್, ಎನ್ ಚಂದ್ರಶೇಖರ ಅವರೊಂದಿಗೆ ಸೇರಿ ಆರೋಪಿ ರಂಜಿತ್ ಹೊಸಪೇಟೆ, ವಿಜಯನಗರ ಜಿಲ್ಲೆ ಪತ್ತೆಮಾಡಿ ಈತನನ್ನು ವಿಚಾರಣೆಗೊಳಪಡಿಸಿ ಆರೋಪಿತ ಪಡೆದಿದ್ದ ನಗದು ಹಣ ರೂಪಾಯಿ 5 ಲಕ್ಷ ಜಪ್ತು ಮಾಡಿದ್ದಾರೆ.
ಪೊಲೀಸ್ ಅಧೀಕ್ಷಕರು ಬಳ್ಳಾರಿ, ಈ ಕಾರ್ಯಚರಣೆ ಮಾಡಿದ ಬಳ್ಳಾರಿ ಸಿ.ಇ.ಎನ್. ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಅವರಿಗೆ ಶ್ಲಾಘಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


