ದಿನದ ಸುದ್ದಿ
ರಸಗೊಬ್ಬರ, ಬಿತ್ತನೆಬೀಜಗಳ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ : ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ
ಸುದ್ದಿದಿನ ಡೆಸ್ಕ್ : ರಸಗೊಬ್ಬರ, ಬಿತ್ತನೆಬೀಜಗಳ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರೈತರಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಸಕಾಲಕ್ಕೆ ಒದಗಿಸಲು ಸರ್ಕಾರ ಆದ್ಯತೆ ಮೇಲೆ ಕ್ರಮಕೈಗೊಳ್ಳುತ್ತಿದೆ ಎಂದರು.
ಮುಂಬರುವ ಮುಂಗಾರು ಹಂಗಾಮಿಗೆ ಅಗತ್ಯವಿರುವ ಪ್ರಮಾಣದಲ್ಲಿ ರಸಗೊಬ್ಬರ ದಾಸ್ತಾನಿದ್ದು, ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ರಿಯಾಯಿತಿ ಯೋಜನೆಯಡಿ ಭತ್ತ, ರಾಗಿ, ಜೋಳ, ಮೆಕ್ಕೆಜೋಳ, ಉದ್ದು, ಹೆಸರು, ಕಡಲೆ, ಅಲಸಂದೆ, ಸೂರ್ಯಕಾಂತಿ, ನೆಲಕಡಲೆ ಸೇರಿದಂತೆ ವಿವಿಧ ಬೆಳೆಗಳ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇಕಡ 50ರವರೆಗೆ ಹಾಗೂ ಪರಿಶಿಷ್ಟ ವರ್ಗ ಮತ್ತು ಪಂಗಡದವರಿಗೆ ಶೇಕಡ 75ರಷ್ಟು ರಿಯಾಯಿತಿ ದರದಲ್ಲಿ ಹೋಬಳಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 12ಲಕ್ಷ 67ಸಾವಿರ ರೈತರು ಬೆಳೆವಿಮೆಗಾಗಿ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಈಗಾಗಲೇ 2ಲಕ್ಷ 10 ಸಾವಿರ ರೈತರಿಗೆ 135.72ಕೋಟಿ ರೂಪಾಯಿ ಬೆಳೆವಿಮೆ ಪರಿಹಾರಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಿಲಾಗಿದೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243