ದಿನದ ಸುದ್ದಿ
ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನ ಡೆಸ್ಕ್:ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಭ್ರೂಣ ಹತ್ಯೆ ತಡೆಗೆ ಮಂಡ್ಯ, ಬೆಳಗಾವಿ, ಬೆಂಗಳೂರು ಮತ್ತಿತರ ಕಡೆ ಕಾರ್ಯಾಚರಣೆ ಮಾಡಲಾಗುತ್ತಿದೆ. ಭ್ರೂಣ ಹತ್ಯೆ ಪ್ರಕರಣಗಳ ತಡೆಗೆ ಜಾಗೃತಿ ಮೂಡಿಸಲಾಗುತ್ತಿದೆ. ವ್ಯವಸ್ಥೆ ಬದಲಾವಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಭ್ರೂಣ ಹತ್ಯೆ ಕಾನೂನು ಬಾಹಿರ ಕೆಲಸ. ಹೆಣ್ಣು ಭ್ರೂಣ ಹತ್ಯೆ ಮಹಾಲಿಂಗಪುರದಲ್ಲಿ ನಡೆದಿದ್ದು ಜಿಲ್ಲೆಗೆ ಒಂದು ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಚರ್ಚೆ ಮಾಡಿ, ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243