ದಿನದ ಸುದ್ದಿ
ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪೊಕ್ಸೋ ಕಾಯ್ದೆ ಅನುಷ್ಠಾನ : ಗೃಹ ಸಚಿವ ಆರಗ ಜ್ಞಾನೇಂದ್ರ
ಸುದ್ದಿದಿನ, ಬೆಳಗಾವಿ: ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪೊಕ್ಸೋ ಕಾಯ್ದೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಅವರು, ಪೊಕ್ಸೋ ಕಾಯ್ದೆ ಅನ್ವಯ ದಾಖಲಿಸಿರುವ ಪ್ರಕರಣಗಳ ವಿಚಾರಣೆ ನಡೆಸಲು ಈಗಾಗಲೇ ಪ್ರತಿ ಜಿಲ್ಲೆಗೊಂದರಂತೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ ಎಂದರು.
ಈ ಪ್ರಕರಣಗಳಲ್ಲಿ ನೊಂದವರ ಪರ ಸಮರ್ಥವಾಗಿ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲಾಗಿದೆ ಎಂದು ಸದನಕ್ಕೆ ಸಚಿವರು ಮಾಹಿತಿ ನೀಡಿದರು.
ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗುವುದು. ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಕರಾಟೆ ತರಬೇತಿ ನೀಡಲಾಗುತ್ತಿದೆ ಎಂದರು.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ನಿಟ್ಟಿನಲ್ಲಿ ನಿರ್ಭಯ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 250ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243