ದಿನದ ಸುದ್ದಿ
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ಥಿಗೆ ಅಧಿಕಾರಿಗಳಿಗೆ ಸಚಿವರಿಂದ ಕಟ್ಟುನಿಟ್ಟಿನ ಸೂಚನೆ
ಸುದ್ದಿದಿನ ಡೆಸ್ಕ್ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ, ಸಕಲೇಶಪುರ ಮತ್ತು ಅಡ್ಡಹೊಳೆ ವ್ಯಾಪ್ತಿಯಲ್ಲಿ ಹೆದ್ದಾರಿಯು ತೀರ ಹದಗೆಟ್ಟಿರುವುದರಿಂದ ತಕ್ಷಣವೆ ದುರಸ್ಥಿಕಾರ್ಯ ಕೈಗೆತ್ತಿಕೊಳ್ಳುವಂತೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮತ್ತು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವರು, ಈ ಶಿಥಿಲಗೊಂಡ ಹೆದ್ದಾರಿಯಿಂದಾಗಿ ವಾಹನಗಳಿಗೆ ಆ ಭಾಗದಲ್ಲಿ ಸಂಚರಿಸುವುದೇ ದುಸ್ಥರವಾಗಿದೆ. ಈ ಬಗ್ಗೆ ಸಾರ್ವಜನಿಕರಿಂದರೂ ವ್ಯಾಪಕ ದೂರುಗಳು ಬಂದಿದ್ದು, ಇನ್ನೆರಡು ತಿಂಗಳೊಳಗಾಗಿ ಸಮರೋಪಾಧಿಯಲ್ಲಿ ದುರಸ್ಥಿ ಕಾಮಗಾರಿಗಳನ್ನು ಆರಂಭಿಸಬೇಕು. ಇನ್ನು 10 ದಿನಗಳ ಒಳಗಾಗಿ ಈ ಹೆದ್ದಾರಿಯನ್ನು ಸುಸ್ಥಿತಿಗೆ ತರಬೇಕೆಂದು ಉಭಯ ಸಚಿವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243