Connect with us

ದಿನದ ಸುದ್ದಿ

ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಎಸ್ ಜೆ ಎಮ್ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Published

on

ಸುದ್ದಿದಿನ,ಚಿತ್ರದುರ್ಗ : ನಗರದ ಎಸ್ ಜೆ ಎಂ ಕಾಲೇಜ್ ಆಫ್ ಫಾರ್ಮಸಿ ಯ ಅಂತಿಮ ವರ್ಷ ಬಿ ಫಾರ್ಮಸಿ ಪದವಿ ಪಡೆದ ವಿದ್ಯಾರ್ಥಿಗಳಾದ ಸುಶೀಲಾ ಕುಮಾರಿ 357 ನೇ ರ‍್ಯಾಂಕ್‌, ನಿತಿನ್ ಎಸ್ ದೇವ್ 739 ನೇ ರ‍್ಯಾಂಕ್‌ , ಪ್ರವರ ಸೇನಾ 3026ನೇ ರ‍್ಯಾಂಕ್‌ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಾದ ನವ್ಯ ಜಿ ಹಿರೇಮಠ್ 1816 ನೇ ರ‍್ಯಾಂಕ್‌ ನಸೀಮ ಜಹಾನ್ 2245 ನೇ ರ‍್ಯಾಂಕ್‌ ಪಡೆದಿರುತ್ತಾರೆ.

GPAT ಗ್ರಾಜುಯೇಟ್ ಫಾರ್ಮಸಿ ಆಪ್ಟಿಟ್ಯೂಡ್ ಟೆಸ್ಟ್ (GPAT) ಮಾನ್ಯತೆಯನ್ನು ಪಡೆದು ತೇರ್ಗಡೆ ಯಾದ ವಿದ್ಯಾರ್ಥಿಗಳಿಗೆ National Institute of Pharmaceutical Education & Research (NIPER) ನೈಪರ್ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ನಡೆಸುವ ಪರೀಕ್ಷೆಗಳಲ್ಲಿ ಈ ವಿದ್ಯಾರ್ಥಿಗಳು ಮಾನ್ಯತೆಯನ್ನು ಪಡೆದಿರುತ್ತಾರೆ.

ಈ ಸ್ನಾತಕೋತ್ತರ ಔಷಧಿ ವಿಜ್ಞಾನ ಪರೀಕ್ಷೆಯಲ್ಲಿ ಮಾನ್ಯತೆ ಹೊಂದಿದವರಿಗೆ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸಕ್ಕಾಗಿ ಪ್ರತಿ ತಿಂಗಳು ಸರಿಸುಮಾರು 18 ರಿಂದ 20 ಸಾವಿರ ವಿದ್ಯಾರ್ಥಿ ವೇತನವನ್ನು ಪಡೆಯುತ್ತಾರೆ. ಈ ಮಾನ್ಯತೆಯನ್ನು ಪಡೆದಿರುವ ವಿದ್ಯಾರ್ಥಿಗಳು ಕಾಲೇಜಿಗೆ ಹಾಗೂ ಪೋಷಕರಿಗೂ ಗೌರವವನ್ನು ಮತ್ತು ಇತರ ಕಿರಿಯ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ಕೊಟ್ಟಿರುತ್ತಾರೆ.

ಪೋಷಕರಿಗೆ ಸ್ನಾತಕೋತ್ತರ ಪದವಿಯ ಶುಲ್ಕ ಹಾಗೂ ಖರ್ಚುಗಳ ಭಾರವನ್ನು ನೀಗಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಸ್ ಜೆ ಎಂ ವಿದ್ಯಾಪೀಠ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ ಎಸ್ ನಾಗರಾಜ್ ಮತ್ತು ಕಾಲೇಜಿನ ಆಡಳಿತ ಮಂಡಳಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಶುಭಕೋರಿ ಹರ್ಷ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಆಸ್ತಿ ತೆರಿಗೆ ಪಾವತಿಸಿ ರಿಯಾಯಿತಿ ಪಡೆಯಿರಿ

Published

on

ಸುದ್ದಿದಿನ,ದಾವಣಗೆರೆ :ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿಸಲು ಏಪ್ರಿಲ್ 2024 ರಿಂದ ಪ್ರಾರಂಭವಾಗಿದ್ದು ಸಕಾಲದಲ್ಲಿ ಪಾವತಿಸಿದವರಿಗೆ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯತಿ ನೀಡುವ ಸೌಲಭ್ಯವನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಸ್ವತ್ತಿಗೆ ಸಂಬಂಧಿಸಿದ ಆಸ್ತಿ ತೆರಿಗೆಯನ್ನು ಕೂಡಲೇ ಪಾವತಿಸಿ ಶೇ.5 ರ ರಿಯಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು.

ಆಸ್ತಿ ತೆರಿಗೆ ಪಾವತಿಸಿಕೊಳ್ಳುವ ಸ್ಥಳ: ವಲಯ ಕಚೇರಿ-1, ಮಹಾನಗರಪಾಲಿಕೆ, ರಾಜೀವಗಾಂಧಿ ಬಡಾವಣೆ, ಬೂದಾಳ್ ರಸ್ತೆ ದಾವಣಗೆರೆ. ವಲಯ ಕಚೇರಿ-2, ಮಹಾನಗರಪಾಲಿಕೆ, ಲೋಕಿಕೆರೆ ರಸ್ತೆ, ಟಿವಿ ಸ್ಟೇಷನ್ ಎದುರು ದಾವಣಗೆರೆ, ವಲಯ ಕಚೇರಿ-3, ಮಹಾನಗರಪಾಲಿಕೆ, ಆಶ್ರಯ ಆಸ್ಪತ್ರೆ ಪಕ್ಕ ದಾವಣಗೆರೆ, ಸಾರ್ವಜನಿಕರು ವೆಬ್ ಸೈಟ್ಲಿಂ http://davanagerecitycorp.org ಕ್‍ನ್ನು ಉಪಯೋಗಿಸಿಕೊಂಡು ಮತ್ತು ಗೂಗಲ್ ಪೇ, ಪೋನ್ ಪೇ, ನಗದು, ಚೆಕ್ ಮುಖಾಂತರವೂ ಸಹ ಆಸ್ತಿ ತೆರಿಗೆ ಪಾವತಿಸಬಹುದೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ : ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Published

on

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ಆವಾಸ್ ಯೋಜನೆ -ಪಿಎಂಎವೈ ಅಡಿಯಲ್ಲಿ 3 ಕೋಟಿ ಗ್ರಾಮೀಣ ಮತ್ತು ನಗರ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅರ್ಹ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಲು ಕೇಂದ್ರ ಸರ್ಕಾರವು 2015-16 ರಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಯನ್ನು ಅನುಷ್ಠಾನಗೊಳಿಸುತ್ತಿದೆ.

ಪಿಎಂಎವೈ ಅಡಿಯಲ್ಲಿ, ಕಳೆದ 10 ವರ್ಷಗಳಲ್ಲಿ ವಸತಿ ಯೋಜನೆಗಳ ಅಡಿಯಲ್ಲಿ ಅರ್ಹ ಬಡ ಕುಟುಂಬಗಳಿಗಾಗಿ ಒಟ್ಟು 4.21 ಕೋಟಿ ಮನೆಗಳ ನಿರ್ಮಾಣ ಕಾರ್‍ಯವನ್ನು ಪೂರ್ಣಗೊಳಿಸಲಾಗಿದೆ. ಪಿಎಂಎವೈ ಅಡಿಯಲ್ಲಿ ನಿರ್ಮಿಸಲಾದ ಎಲ್ಲಾ ಮನೆಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಇತರ ಯೋಜನೆಗಳ ಸಮನ್ವಯದೊಂದಿಗೆ ಶೌಚಾಲಯಗಳು, ಎಲ್ ಪಿ ಜಿ ಸಂಪರ್ಕ, ವಿದ್ಯುತ್ ಸಂಪರ್ಕ, ನಲ್ಲಿ ಸಂಪರ್ಕ ಮುಂತಾದ ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.

ಅರ್ಹ ಕುಟುಂಬಗಳ ಸಂಖ್ಯೆಯ ಹೆಚ್ಚಳದಿಂದ ಉಂಟಾಗುವ ವಸತಿ ಅವಶ್ಯಕತೆಗಳನ್ನು ಪೂರೈಸಲು 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೆರವು ನೀಡಲು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಕ ಸಾ ಪ ಮಾಜಿ ಅಧ್ಯಕ್ಷ ಪ್ರೊ . ಎಸ್ ಬಿ ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿನಿಧಿ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ತರಳಬಾಳು ಬಡಾವಣೆಯ ಅವರ ನಿವಾಸದಲ್ಲಿ ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ ವಾಮದೇವಪ್ಪ ಮತ್ತು ಪದಾಧಿಕಾರಿಗಳು ಇಂದು ಪ್ರದಾನ ಮಾಡಿ ಗೌರವಿಸಿದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು  ಅನುವಾದ ಸಾಹಿತ್ಯಕ್ಕಾಗಿ ನೀಡುವ 2023ರ ‘ಶ್ರೀಮತಿ ಭಾರತಿ ಮೋಹನ ಕೋಟಿ ದತ್ತಿ ಪಶಸ್ತಿ’ ಗೆ  ಪ್ರೊ. ಎಸ್.ಬಿ.ರಂಗನಾಥ್  ಅನುವಾದಿಸಿದ ಖ್ಯಾತ ಲೇಖಕ ಶಶಿ ತರೂರು ಅವರ ‘ಕಗ್ಗತ್ತಲ ಕಾಲ’ ಕೃತಿಯು ಆಯ್ಕೆಯಾಗಿತ್ತು. ಶಶಿ ತರೂರ್ ಅವರ ಇಂಗ್ಲಿಷ್ An Era of Darkness ಎಂಬ ಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಇದನ್ನು ಪ್ರೊ. ರಂಗನಾಥ್ ಅವರು ಕೊರೊನಾ ಕಾಲದ ಲಾಕ್ ಡೌನ್‌ ಸಂದರ್ಭದಲ್ಲಿ ಕನ್ನಡಕ್ಕೆ ಅನುವಾದಿಸಿದ್ದರು. 2022ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಈ ಕೃತಿಯನ್ನು ಪ್ರಕಟಿಸಿತ್ತು.

ಪ್ರೊ. ರಂಗನಾಥ್ ಇದುವರೆಗೂ ‘ಪ್ರಜಾವಾಣಿ ‘ ಯ ಅಂಕಣ ಬರಹಗಳ ಸಂಗ್ರಹ ‘ಎಲೆಲೆ ಮಧುಬಾಲೆ’, ‘ಕಚಗುಳಿ(ಗೆ) ಕಾಲ’ ಸೇರಿದಂತೆ ಹತ್ತು ಕೃತಿಗಳ ಲೇಖಕರು. ಬಂಗಾಳಿಯ ಪ್ರಸಿದ್ಧ ಕಾದಂಬರಿಗಳಾದ ‘ಭುವನ್ ಸೋಮ್’ , ‘ಪ್ರತಿದ್ವಂದಿ’ ಮುಂತಾದ ಏಳು ಕೃತಿಗಳನ್ನು ಅನುವಾದಿಸಿದ್ದಾರೆ.  ಇವರ ‘ ಟಿಪ್ಪು ಸುಲ್ತಾನನ ಖಡ್ಗ’ ಕೃತಿಯು ಮೂರು ಮುದ್ರಣಗಳನ್ನು ಕಂಡಿದೆ. ಇತ್ತೀಚೆಗೆ ಅನುವಾದಿಸಿದ ನಿವೃತ್ತ ಐ ಎ ಎಸ್ ಅಧಿಕಾರಿ ಎಂ ಮದನಗೋಪಾಲ್ ಅವರ ‘ಕಾಮನ ಬಿಲ್ಲನು ಬಂಬತ್ತಿ’ ಕೃತಿಯು ರಾಯಚೂರಿನಲ್ಲಿ ಲೋಕಾರ್ಪಣೆಗೊಂಡಿತ್ತು.

ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಪ್ರೊ.ಎಸ್.ಬಿ.ರಂಗನಾಥ್ ಅವರು ತಮ್ಮ ತೀವ್ರ ಅನಾರೋಗ್ಯದ ಕಾರಣದಿಂದ ಹಾಜರಿರಲು ಸಾಧ್ಯವಾಗಿರಲಿಲ್ಲ. ಈಗ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಎಸ್.ಬಿ.ರಂಗನಾಥ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಪ್ರಶಸ್ತಿ ಫಲಕ ಮತ್ತು ಹತ್ತು ಸಾವಿರ ನಗದನ್ನು  ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪರಿಷತ್ತಿನ ಪದಾಧಿಕಾರಿಗಳಾದ ರಾಘವೇಂದ್ರ ನಾಯರ್, ಎಸ್ ಎಂ ಮಲ್ಲಮ್ಮ, ರುದ್ರಾಕ್ಷಿ ಬಾಯಿ ಪುಟ್ಟನಾಯಕ್, ತಾಲ್ಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಕಾರ್ಯದರ್ಶಿಗಳಾದ ನಾಗರಾಜ ಸಿರಿಗೆರೆ, ದಾಗಿನಕಟ್ಟೆ ಪರಮೇಶ್ವರಪ್ಪ, ನಿರ್ದೇಶಕರಾದ ಷಡಾಕ್ಷರಪ್ಪ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending