ದಿನದ ಸುದ್ದಿ
ಲಾಕ್ಡೌನ್ ಅವಧಿಯನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು
ಸುದ್ದಿದಿನ,ದಾವಣಗೆರೆ : ಕೋವಿಡ್-19 ನಿಯಂತ್ರಣ ಹಿನ್ನೆಲೆ ಘೋಷಿಸಿರುವ ಲಾಕ್ಡೌನ್ ಅವಧಿಯನ್ನು ವಿದ್ಯಾರ್ಥಿಗಳು ಸಕಾರಾತ್ಮಕವಾಗಿ ತೆಗದುಕೊಂಡು ಈ ಸಮಯವನ್ನು ಓದಿಗೆ, ಜ್ಞಾನರ್ಜನೆಗೆ ಬಳಸಿ ಹಾಗೂ ಕೇರಿಯರ್ಯನ್ನು ಉತ್ತಮಗೊಳಿಸಬಹುದಾದ ಯೋಜನೆಯನ್ನು ರೂಪಿಸಿಕೊಳ್ಳಲು ಬಳಸಿಕೊಳ್ಳಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪರೀಕ್ಷಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸ್ಪರ್ಧಿಸಲು ಆಯೋಜಿಸಿರುವ 50 ದಿನಗಳ ಆನ್ಲೈನ್ ತರಬೇತಿಗೆ ಶನಿವಾರ ಚಾಲನೆ ನೀಡಿದರು.
ಈ ತರಬೇತಿ ಶಿಬಿರಕ್ಕೆ ಆನ್ಲೈನ್ ಮೂಲಕ ಚಾಲನೆ ನೀಡಿ ಶುಭಹಾರೈಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ಆದರ್ಶಪೂರ್ವಕವಾಗಿ ಕಾರ್ಯನಿರ್ವಹಿಸುತ್ತಿವೆ.
ಸಮಾಜಕ್ಕೆ ಹಾಗೂ ಯುವ ಸಮುದಾಯವನ್ನು ವಿದ್ಯಾವಂತರನ್ನಾಗಿಸುವ ತತ್ವದ ಮೇಲೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕಾರ್ಯನಿರ್ವಹಿಸುತ್ತಿದೆ. ಅದರಂತೆ ಕೊವಿಡ್ ಸಮಯದಲ್ಲೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್ಲೈನ್ ತರಬೇತಿ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಇದೊಂದು ಮಾದರಿ ಕಾರ್ಯವಾಗಿದೆ ಎಂದು ವಿಶ್ವವಿದ್ಯಾನಿಲಯ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೋವಿಡ್-19 ಜಾಗತಿಕ ಸಾಂಕ್ರಾಮಿಕದಿಂದ ಬದಲಾದ ಕಾಲಘಟ್ಟದಲ್ಲಿ ಎಲ್ಲರ ಜೀವನದಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ಈ ಸಾಂಕ್ರಾಮಿಕ ಉಂಟು ಮಾಡಿರುವ ಸಮಯದಿಂದ ಖಿನ್ನತೆಗೆ ಒಳಗಾಗಬೇಕಿಲ್ಲ. ಸಕಾರಾತ್ಮಕ ಭಾವನೆಯಿಂದ ಇರಬೇಕು.
ಇಂಥ ಸಮಯದಲ್ಲಿ ವಿದ್ಯಾರ್ಥಿಗಳು ಈ ತರಹದ ಶಿಬಿರಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದ ಅವರು ಮುಕ್ತ ವಿಶ್ವವಿದ್ಯಾಲಯ ಆಯೋಜಿಸಿರುವ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯ ಆನ್ಲೈನ್ ತರಬೇತಿ ಶಿಬಿರ ಬಹಳಷ್ಟು ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದರು.
ಲಾಕ್ಡೌನ್ ಸಮಯದಲ್ಲಿ ಜ್ಞಾನರ್ಜನೆಗೆ ಒತ್ತು ಕೊಡಿ
ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಮಾತನಾಡಿ, ಕೋವಿಡ್-19 ನಿಂದ ದೊರೆತಿರುವ ಸಮಯವನ್ನು ವ್ಯರ್ಥ ಮಾಡದೇ, ವಿದ್ಯಾರ್ಥಿಗಳು ಮತ್ತು ಪರೀಕ್ಷಾರ್ಥಿಗಳು ಉತ್ತಮವಾಗಿ ಬಳಸಿಕೊಳ್ಳಬೇಕು. ತಮ್ಮ ಜ್ಞಾನರ್ಜನೆಗೆ ಈ ಸಮಯವನ್ನು ವ್ಯಯಿಸಬೇಕು ಎಂದರು.
ಹಣದಿಂದ ಎಲ್ಲವನ್ನು ಖರೀದಿಸಬಹುದು. ಆದರೆ ಜ್ಞಾನವನ್ನು ಯಾರಿದಂಲೂ ಖರೀದಿಸಲು ಆಗದು. ಜಗತ್ತಿನಲ್ಲಿ ಖರೀದಿಸಲಾಗದ ಆಸ್ತಿ ಎಂದರೆ ಜ್ಞಾನ ಮಾತ್ರ ಎಂದರು.
ವಿಶ್ವವಿದ್ಯಾಲಯ ಕಳೆದ ಎರಡು ವರ್ಷದಲ್ಲಿ ಅನೇಕ ಆವಿಷ್ಕಾರಗಳನ್ನು ತಂದಿದೆ. ಕೋವಿಡ್-19 ಸಂದರ್ಭದಲ್ಲಿ ತನ್ನ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿದೆ.
ಕಳೆದ ವರ್ಷ ಈ ಸಂದರ್ಭದಲ್ಲಿ ಕೋವಿಡ್19 ತಂದಿಟ್ಟ ಲಾಕ್ಡೌನ್ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳು ಸುಮ್ಮನೆ ಕೂರಬಾರದು. ಮೂಲೆಗುಂಪು ಆಗಬಾರದೆಂದು ಐಎಎಸ್, ಕೆಎಎಸ್, ಬ್ಯಾಂಕಿಂಗ್ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ತರಬೇತಿಯನ್ನು ಆರಂಭಿಸಿದ್ದೆವು. ಇದಕ್ಕೆ ಕೆಎಸ್ಓಯು ಕನೆಕ್ಟ್ ಎಂಬ ಆ್ಯಪ್ನ್ನು ವೇದಿಕೆಯನ್ನಾಗಿ ನಿರ್ಮಿಸಿದ್ದೇವೆ.
ಕಳೆದ ಬಾರಿ ಆರಂಭಿಸಿದ ಈ ಶಿಬಿರವನ್ನು ಉನ್ನತ ಶಿಕ್ಷಣ ಸಚಿವವರು ಹಾಗೂ ಡಿಸಿಎಂ ಆದ ಅಶ್ವತ್ಥನಾರಾಯಣ ಅವರು ಉದ್ಘಾಟಿಸಿ ಮುಕ್ತ ವಿಶ್ವವಿದ್ಯಾಲಯವು ಕೋವಿಡ್ ಸಂದರ್ಭದಲ್ಲಿ ಆರಂಭಿಸಿರುವ ಕೆಲಸಗಳು ಮಾದರಿಯಾಗಿದೆ. ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯಕ್ಕೆ ಮಾದರಿ ಎಂದು ಶ್ಲಾಘಿಸಿದ್ದರು. ಇವರ ಘೋಷಣೆಯನ್ನು ಗಟ್ಟಿಗೊಳಿಸಬೇಕೆಂದು ಕಾರ್ಯ ಪ್ರವೃತ್ತರಾಗಿದ್ದೇವೆ.
ಇದನ್ನೂ ಓದಿ | ತರಳಬಾಳು ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ
ವಿಶ್ವವಿದ್ಯಾನಿಲಯದ ಎಲ್ಲಾ ಪ್ರಾಧ್ಯಾಪಕರಿಗೆ ಲ್ಯಾಪ್ಟಾಪ್ ವಿತರಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲರು ಆನ್ಲೈನ್ ಪಾಠ ಮಾಡಲು ಸೂಚನೆ ನೀಡಲಾಗಿದೆ. ಕಳೆದ ಕೋವಿಡ್ ಸಂದರ್ಭದಲ್ಲಿ ಆರಂಭದಲ್ಲಿ ಆರಂಭವಾದ ನಮ್ಮ ಚಟುವಟಿಕೆಗಳು ಇನ್ನೂ ನಿಂತಿಲ್ಲ. ನಿರಂತರವಾಗಿ ಸಾಗುತ್ತಿವೆ ಎಂದು ತಿಳಿಸಿದರು.
ಮುಕ್ತ ವಿವಿ ಕುಲಸಚಿವ ಪ್ರೊ.ಆರ್.ರಾಜಣ್ಣ ಮಾತನಾಡಿ, ಕಳೆದ ಬಾರಿ ಕೋವಿಡ್ ಮತ್ತು ಲಾಕ್ಡೌನ್ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ತೊಂದರೆಯಾಗದಂತೆ ಆನ್ಲೈನ್ ಮೂಲಕ ತರಬೇತಿ ನೀಡಿದ್ದ ಮುಕ್ತ ವಿಶ್ವವಿದ್ಯಾಲಯವು ಈ ಬಾರಿಯೂ ಪರೀಕ್ಷಾ ಆಕಾಂಕ್ಷಿಗಳಿಗೆ ಆನ್ಲೈನ್ ತರಬೇತಿ ಶಿಬಿರ ಆರಂಭಿಸಿದೆ.
ಈ ಆನ್ಲೈನ್ ಶಿಬಿರಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ 400ಕ್ಕೂ ಹೆಚ್ಚು ಪರೀಕ್ಷಾ ಆಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷಾ ಅವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಸಿದ್ದತೆ ಕುರಿತು ಉಪಯುಕ್ತ ಮಾಹಿತಿ ನೀಡಿದರು. ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ ಅವರು ಶಿಬಿರದ ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ3 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

