ದಿನದ ಸುದ್ದಿ
ದೇಶದಲ್ಲಿ ಔಷಧಿಗಳ ರಫ್ತಿನಲ್ಲಿ ಗಣನೀಯ ಪ್ರಗತಿ
ಸುದ್ದಿದಿನ ಡೆಸ್ಕ್ :ದೇಶದಲ್ಲಿ ಔಷಧಿಗಳ ರಫ್ತಿನಲ್ಲಿ ಗಣನೀಯ ಪ್ರಗತಿ ಕಂಡು ಬಂದಿದೆ. 2013-14ರಲ್ಲಿ ಔಷಧಿಗಳ ರಫ್ತು ಮೌಲು 90ಸಾವಿರದ 415 ಕೋಟಿ ರೂಪಾಯಿಗಳಷ್ಟಿದ್ದದ್ದು, 2021-22ನೇ ಸಾಲಿನಲ್ಲಿ 1 ಲಕ್ಷ 83 ಸಾವಿರದ 422 ಕೋಟಿ ರೂಪಾಯಿಗೆ ಏರಿಕೆಯಾಗಿದೆ.
2021-22ರಲ್ಲಿ ರಫ್ತು ಸಾಧನೆ ಔಷಧಿ ವಲಯದ ಅತ್ಯುತ್ತಮ ಕಾರ್ಯದಕ್ಷತೆ ಎಂದು ಬಿಂಬಿಸಲಾಗಿದೆ. ಇದೊಂದು ಗಣನೀಯ ಪ್ರಗತಿಯಾಗಿದ್ದು, ಕಳೆದ 8 ವರ್ಷಗಳಲ್ಲಿ ಬಹುತೇಕ 10ಶತಕೋಟಿ ಅಮೆರಿಕಾ ಡಾಲರ್‌ಗಳಷ್ಟಾಗಿದೆ ಎಂದು ಹೇಳಲಾಗಿದೆ.
ಔಷಧಿ ರಫ್ತಿನಲ್ಲಾಗಿರುವ ಸಾಧನೆ ಕುರಿತು ಟ್ವೀಟ್ ಸಂದೇಶದಲ್ಲಿ ತಿಳಿಸಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕ್ರಿಯಾತ್ಮಕ ನಾಯಕತ್ವದಲ್ಲಿ ಭಾರತ ವಿಶ್ವದ ಔಷಧ ಕೇಂದ್ರವಾಗಿ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದ್ದಾರೆ.
2020-21ನೇ ಸಾಲಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ, 2021-22ರಲ್ಲಿ ಭಾರತೀಯ ಔಷಧ ರಫ್ತು ಪ್ರಮಾಣ ಮತ್ತೊಮ್ಮೆ ಆರೋಗ್ಯಕರ ಬೆಳವಣಿಗೆಯನ್ನು ಸಾಧಿಸಿದೆ ಎಂದು ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


