ದಿನದ ಸುದ್ದಿ
ಅಂಗನವಾಡಿ ಟೀಚರ್ ಮಕ್ಕಳ ಯಶೋಗಾಥೆ..!
ಅವರು ಡಿವೈಎಸ್ಪಿ , ಪತ್ನಿ ಡಾಕ್ಟರ್. ಇವರಿಬ್ಬರ ತಾಯಂದಿರು ಅಂಗನವಾಡಿ ಟೀಚರ್. ಮಕ್ಕಳ ಸಾಧನೆಗೆ ಈ ಹೆತ್ತಮ್ಮನೇ ಕಾರಣ. ಅಮ್ಮನ ದಿನಾಚರಣೆ ನಿಮಿತ್ತ ಸಣ್ಣ ಲೇಖನ. ತಪ್ಪದೇ ಓದಿ.ಇದರೊಳಗೆ ನೋವು, ನಲಿವು, ಪ್ರೀತಿಯ ಹೂರಣವಿದೆ.
ಸುದ್ದಿದಿನ,ದಾವಣಗೆರೆ : ಅವರೊಬ್ಬ ಉತ್ತಮ, ದಕ್ಷ ಪೊಲೀಸ್ ಅಧಿಕಾರಿ. ಪತ್ನಿ ಮಾವಿನಕಟ್ಟೆಯಲ್ಲಿ ವೈದ್ಯೆ. ಇಬ್ಬರದ್ದು ಸರಳ ಜೀವನ. ಇವರ ಸುಖೀ ಬದುಕಿಗೆ ಕಾರಣ ಆದವರೇ ಹೆತ್ತ ತಾಯಿ !
ಹೌದು, ಚನ್ನಗಿರಿ ಡಿವೈಎಸ್ಪಿ ಡಾ.ಸಂತೋಷ್ ಹಾಗೂ ಪತ್ನಿ ಡಾ.ಪವಿತ್ರಾ ಅವರ ಸಾಧನೆ ಹಿಂದೆ ತಾಯಿ ಇದ್ದಾರೆ. ಇವರು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಡಿವೈಎಸ್ಪಿ ಸಂತೋಷ್ ತಾಯಿ ಸುವರ್ಣಮ್ಮ, ಪತ್ನಿ ಪವಿತ್ರರ ತಾಯಿ ಹಾಲಮ್ಮ. ಇವರಿಬ್ಬರು ಕೂಡ ಅಂಗನವಾಡಿ ಕಾರ್ಯಕರ್ತೆಯರು ಎಂಬುದು ಒಂದು ವಿಶೇಷ. ಹಾಗೆ ಕಾಕಾತಾಳೀಯ ಕೂಡ.
ಈ ಇಬ್ಬರೂ ತಾಯಂದಿರು ಜೀವನದಲ್ಲಿ ಮಕ್ಕಳನ್ನು ಓದಿಸಿ, ಉನ್ನತ ಸ್ಥಾನಕ್ಕೆ ತಲುಪಿಸುವಲ್ಲಿ ಅಗಾಧ ಶ್ರಮ ಪಟ್ಟಿದ್ದಾರೆ.
ಡಿವೈಎಸ್ಪಿ ತಾಯಿ ಸುವರ್ಣಮ್ಮರ ತವರುಮನೆ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ. ಅಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಪತ್ನಿ ಡಾ.ಪವಿತ್ರಾ ಅವರ ತಾಯಿ ಹಾಲಮ್ಮ ಕೊಟ್ಟೂರು ಬಳಿಯ ಐನಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಬ್ಬರು ಸ್ನೇಹಿತೆಯರಾಗಿದ್ದರು ಅನ್ನೋದು ಮತ್ತೊಂದು ವಿಶೇಷ. ಇವರಿಬ್ಬರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಸದಾ ಚರ್ಚೆ ಮಾಡುತ್ತಿದ್ದರು.
ಅದು 1981ರ ಕಾಲ. ಡಿವೈಎಸ್ಪಿ ಸಂತೋಷ್ ತಾಯಿ ಕಾನಾಹೊಸಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿರುತ್ತಾರೆ. ಆ ಸಣ್ಣ ಆದಾಯ ದಿಂದಲೇ ಮಕ್ಕಳನ್ನು ಓದಿಸುತ್ತಾರೆ. ಕುಟುಂಬದ ಆರ್ಥಿಕ ಸ್ಥಿತಿ ಹೇಳತೀರದು. ಯಥೇಚ್ಛ ಬಡತನ. ಅಷ್ಟಿದ್ದರೂ ಮಕ್ಕಳ ಶಿಕ್ಷಣಕ್ಕೆ ಕೊರತೆ ಮಾಡಲಿಲ್ಲ.
ನಿತ್ಯ ಬೆಳಗ್ಗೆ ಹತ್ತರಿಂದ ಮಧ್ನಾಹ್ನ 1 ಗಂಟೆವರೆಗೂ ಅಂಗನವಾಡಿಯಲ್ಲಿ ಕೆಲಸ. ಬಳಿಕ ಮನೆಯಲ್ಲಿ ಮಕ್ಕಳ ಪಾಲನೆ. ರಜೆ ಇದ್ದ ವೇಳೆ ಹೊಲದಲ್ಲಿ ಕೆಲಸ. ಅಲ್ಲದೇ ಇವರ ತಾಯಿ ಆಗಿನ ಕಾಲದಲ್ಲಿಯೇ ಬಿಎ., ಓದಿದ್ದವರು. ಮೊದಲು ತಾನು ಓದಿಕೊಂಡು, ನಂತರ ಮಗನಿಗೆ ಹೇಳಿಕೊಡುತ್ತಿದ್ದರು. ಸಂತೋಷ್ 1 ರಿಂದ 8 ನೇ ತರಗತಿವರೆಗೂ ತಾಯಿಯೇ ಪಾಠ ಮಾಡುತ್ತಿದ್ದರು.
ಮಳೆಗೆ ಬಿದ್ದ ಮನೆ
ಡಿವೈಎಸ್ಪಿ ಸಂತೋಷ್‌ಗೆ ಓದುವ ಹಂಬಲ. ಎಸ್ಸೆಸ್ಸೆಲ್ಸಿಯಲ್ಲಿ ಕೂಡ್ಲಿಗಿ ತಾಲೂಕಿಗೆ ಟಾಪರ್ ಆಗಿದ್ದರು. ಹೀಗಿರುವಾಗ ಒಂದು ದಿನ ಜೋರಾದ ಮಳೆಗೆ ಮಣ್ಣಿನಿಂದ ಕಟ್ಟಿದ ಮನೆ ಬಿದ್ದಿತ್ತು. ಮೊದಲೇ ಸಂಕಷ್ಟ, ಆ ಕಷ್ಟದಲ್ಲಿ ಈ ಸಮಸ್ಯೆ. ಆದರೂ ಎದೆಗುಂದದ ತಾಯಿ ಸುವರ್ಣಮ್ಮ ಬಿದ್ದ ಮನೆ ಬಾಗಿಲಿಗೆ ಪರದೆಯೊಂದನ್ನು ಕಟ್ಟಿದರು. ಮೂರು ಇಟ್ಟಿಗೆಯಿಟ್ಟು ಒಲೆ ಹೂಡಿ ಅಡುಗೆ ಮಾಡಿ ಇಡೀ ಕುಟುಂಬಕ್ಕೆ ಅನ್ನ ಹಾಕುತ್ತಿದ್ದರು.
ಸಂತೋಷ್ ಈ ಮುರಿದ ಮನೆ ಹೊರಗಡೆ ಕೂತು ಓದಿದರು. ಅಮ್ಮನ ಪ್ರೇರಣೆಯೇ ನಾನೀಗ ಡಿವೈಎಸ್ಪಿ ಹುದ್ದೆಯಲ್ಲಿದ್ದು ಸರಕಾರೀ ಸೇವೆ ಸಲ್ಲಿಸಲು ಒಂದು ಅವಕಾಶ ದೊರೆಯಿತು.
ಪತ್ನಿ ಡಾ.ಪವಿತ್ರಾಮನೆಯಲ್ಲಿಯೂ ಇದೇ ಪರಿಸ್ಥಿತಿ ಇತ್ತು. ಕೊಟ್ಟೂರು ಇವರ ಸ್ವಂತ ಊರು. ಕೆ. ಐನಳ್ಳಿಯಲ್ಲಿ ತಾಯಿ ಹಾಲಮ್ಮ ಅಂಗನವಾಡಿ ಕಾರ್ಯಕರ್ತೆಯಾಗಿರುತ್ತಾರೆ.
ತಂದೆ ಪ್ರಗತಿ ಕೃಷ್ಣ ಬ್ಯಾಂಕ್‌ನಲ್ಲಿ ಡಿ.ದರ್ಜೆ ನೌಕರರಾಗಿರುತ್ತಾರೆ. ಇವರು ಕೂಡ ಆಗಿನ ಕಾಲಕ್ಕೆ ಪಿಯುಸಿ ಓದಿದ್ದರು., ಮಗಳನ್ನು ವೈದ್ಯೆಯನ್ನಾಗಿ ಮಾಡುವ ಹಂಬಲ ಕನಸು ಹೊತ್ತಿರುತ್ತಾರೆ. ಮಗಳು ಕೂಡ ಅಷ್ಟೇ ಚೆನ್ನಾಗಿ ಓದುತ್ತಿದ್ದ ವೇಳೆ ಸಿಇಟಿಯಲ್ಲಿ 2400 ನೇ ರಾಂಕ್ ಗಳಿಸುತ್ತಾರೆ. ಬಳ್ಳಾರಿಯ ಮೆಡಿಕಲ್ ಕಾಲೇಜಿನಲ್ಲಿ ಸೀಟು ಸಿಗುತ್ತದೆ. ಆಗ ಕಾಲೇಜಿಗೆ 16,000 ರೂ. ಬೀಸು ಕಟ್ಟಬೇಕಾಗಿರುತ್ತದೆ. ಆದರೆ ಅಷ್ಟೋಂದು ಹಣ ತಾಯಿ ಬಳಿ ಇರಲಿಲ್ಲ.
ಹೀಗಿರುವಾಗ ಸಂಬಂಧಿಕರೊಬ್ಬರು ಒಡವೆಗಳನ್ನು ಅಡ ಇಟ್ಟು ಹಣ ಕೊಡುತ್ತಾರೆ. ಅಲ್ಲಿಯೂ ಕೂಡ ತಾಯಿ ಪಾತ್ರ ದೊಡ್ಡದು. ಶಿವಮೊಗ್ಗದಲ್ಲಿ ಸೀಟು ಸಿಗುತ್ತದೆ. ಅಲ್ಲಿಂದ ಗುರಿ ಬೆನ್ನತ್ತಿದ್ದ ಪವಿತ್ರಾ ವೈದ್ಯರಾಗಿ ಹೊರ ಹೊಮ್ಮುತ್ತಾರೆ. ಒಟ್ಟಾರೆ ಇವರಿಬ್ಬರ ಸಾಧನೆ ಹಿಂದೆ ಅಂಗನವಾಡಿಯಾಗಿ ಕೆಲಸ ಮಾಡಿದ ತಾಯಿಯರ ಪರಿಶ್ರಮ ಇದೆ. ತ್ಯಾಗ ಇದೆ. ಅದು ಈಗ ಫಲ ಕೊಡುತ್ತಿದೆ..ಹ್ಯಾಟ್ಸ್ ಆಫ್ ಅಮ್ಮ.
ಡಿವೈಎಸ್ಪಿ ಸಂತೋಷ್ ಕೂಡ ಸಿಇಟಿಯಲ್ಲಿ ರಾಂಕ್ ಗಳಿಸುತ್ತಾರೆ. ಬಳ್ಳಾರಿಯಲ್ಲಿ ಮೆಡಿಕಲ್ ಸೀಟು ಸಿಕ್ಕಿರುತ್ತದೆ. ಆದರೆ ಅಲ್ಲಿನ ಕೆಲ ಯುವಕರು ಇವರಿಗೆ ರಾಗಿಂಗ್ ಮಾಡಿರುತ್ತಾರೆ. ಮನಸ್ಸಿಗೆ ಘಾಸಿ ಆಗಿ ವಾಪಸ್ ಕಾನಹೊಸಳ್ಳಿಗೆ ಬರುತ್ತಾರೆ. ಊರಿನ ಜನ ಆಡಿಕೊಂಡರೂ, ತಾಯಿ ಮಾತ್ರ ಛಲ ಬಿಡದೇ ಮಗನನ್ನು ಓದಿಸುತ್ತಾರೆ. ನಂತರ ಉತ್ತರ ಪ್ರದೇಶದ ಬರೇಲಿಗೆ ಹೋಗುತ್ತಾರೆ.
ಅಲ್ಲಿ ತನ್ನ ಸ್ನೇಹಿತ ಐಪಿಎಸ್ ಕೋಚಿಂಗ್ ಓದುವುದನ್ನು ನೋಡಿ ಪ್ರೇರಿತರಾಗಿ ಯುಪಿಎಸ್ಸಿ ಎಕ್ಸಾಂ ಬರೆಯುತ್ತಾರೆ. ಪ್ರಿಮಲರಿ, ಮೇನ್ಸ್ ಆ ಪಾಸ್ ಮಾಡುತ್ತಾರೆ. ಅಂತಿಮ ಕ್ಷಣದಲ್ಲಿ ಲಿಸ್ಟ್‌ನಲ್ಲಿ ಹೆಸರು ಇರೋದಿಲ್ಲ. ಮತ್ತೆ ಸಿಇಟಿ ಬರೆಯುತ್ತಾರೆ ವೆಟನರಿಯಲ್ಲಿ ಸೀಟು ಸಿಗುತ್ತದೆ. ಅದನ್ನು ಮುಗಿಸಿ ಕೆಪಿಎಸ್ಸಿ ಎಕ್ಸಾಂ ಬರೆಯುತ್ತಾರೆ. ಮೊದಲ ಲಿಸ್ಟ್‌ನಲ್ಲಿಯೇ ಆಯ್ಕೆ ಆಗಿ ಆಲೂರಿನಲ್ಲಿ ವೈದ್ಯರಾಗಿ ಡ್ಯೂಟಿ ಮಾಡುತ್ತಾರೆ. ಬಳಿಕ ಕೆಎಸ್‌ಪಿಎಸ್ ಎಕ್ಸಾಂ ಬರೆದು ಡಿವೈಎಸ್ಪಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ.
- ಬಡತನದಲ್ಲಿಯೂ ನನ್ನ ತಾಯಿ ಹಾಗೂ ನನ್ನ ಪತ್ನಿ ತಾಯಿ ಅಂಗನವಾಡಿ ಕಾರ್ಯಕರ್ತೆಯರಾಗಿ ಕೆಲಸ ಮಾಡಿ ನಮ್ಮನ್ನು ಓದಿಸಿದ್ದಾರೆ. ನಮ್ಮ ಈ ಶ್ರಮಕ್ಕೆ ತಾಯಿಯೇ ಕಾರಣ. ಅಂಗನವಾಡಿ ಟೀಚರ್ ಆಗಿ ಮಕ್ಕಳನ್ನು ಓದಿಸೋದಕ್ಕೆ ಆಗೋದಿಲ್ಲ ಎನ್ನುವವರಿಗೆ ನಮ್ಮಿಬ್ಬರ ತಾಯಂದಿರು ಸ್ಫೂರ್ತಿ ಆಗಬಲ್ಲರು.
| ಡಾ.ಸಂತೋಷ್, ಡಿವೈಎಸ್ಪಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


