ಕ್ರೀಡೆ

ಮಧ್ಯಾಹ್ನದ ಪ್ರಮುಖ ಸುದ್ದಿಗಳು

Published

on

ಮಧ್ಯಾಹ್ನದ ಪ್ರಮುಖ ಸುದ್ದಿಗಳು

  1. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ ಪ್ರಾಥಮಿಕ ಸಭೆಯಲ್ಲಿ ವರ್ಚುವಲ್ ರೂಪದಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ವಹಿಸಲಿದ್ದಾರೆ.
  2. ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಹಲವೆಡೆ ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿವೆ. ನದಿಗಳಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. ಈ ಮಧ್ಯೆ ಇಂದೂ ಸಹ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದೆಂಬ ಹವಾಮಾನ ಇಲಾಖೆ ರೆಡ್ ಆಲರ್ಟ್ ಘೋಷಿಸಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಬೆಂಗಳೂರು ಸುತ್ತಮುತ್ತ ಮಳೆಯಾಗುತ್ತಿದೆ.
  3. ಬೆಂಗಳೂರು ನಗರದಲ್ಲೂ ಮಳೆ ಮುಂದುವರೆದಿದ್ದು, ಇನ್ನೂ 2 ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಯಲ್ಲೋ ಅಲರ್ಟ್ ಘೋಷಿಸಿದೆ.
  4. ಎಸ್‌ಎಸ್‌ಎಲ್‌ಸಿ ಫಲಿತಾಂಶದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಯೋಗದಲ್ಲಿ ಮಾನಸಿಕ ಆರೋಗ್ಯ ಸಹಾಯವಾಣಿ ಆರಂಭಿಸಿದೆ. ಒತ್ತಡದಲ್ಲಿರುವ ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ : 080-46110007ಕ್ಕೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರಕಟಿಸಿದ್ದಾರೆ.
  5. ಕಳೆದ 24ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 2 ಸಾವಿರದ 364 ಕೋವಿಡ್ ಸೋಂಕು ಪ್ರಕರಣಗಳು ಧೃಡಪಟ್ಟಿವೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಸಾವಿರದ 419ಕ್ಕೆ ತಲುಪಿದೆ. ದಿನದ ಪಾಸಿಟಿವಿಟಿ ದರ ಶೇಕಡ 0.50ಯಷ್ಟಿದೆ. ಈವರೆಗೆ 4 ಕೋಟಿ 25ಲಕ್ಷ 89 ಸಾವಿರದ 841 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 191.79 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
  6. 2022ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು ಸಧ್ಯದ ಜೀವನ ಶೈಲಿಯಲ್ಲಿ ಒತ್ತಡದಿಂದ ಪಾರಾಗುವಲ್ಲಿ ಯೋಗ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಜೊತೆಗೆ ಯೋಗ ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version