ದಿನದ ಸುದ್ದಿ
ಮದ್ಯಾಹ್ನದ ಸುದ್ದಿ ಮುಖ್ಯಾಂಶಗಳು
ಪ್ರಮುಖ ಸುದ್ದಿ ಮುಖ್ಯಾಂಶಗಳು
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಉಡುಪಿ ಹಾಗೂ ನಾಳೆ ಮಂಗಳೂರು ಜಿಲ್ಲೆಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
- ಕೇಂದ್ರದ ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲಾಭಿವೃದ್ಧಿ ಖಾತೆ ರಾಜ್ಯ ಸಚಿವ ರಾಜೀವ ಚಂದ್ರಶೇಖರ್ ಅವರು ಇಂದು ಮಧ್ಯಾಹ್ನ ಬೆಂಗಳೂರಿನ ಹೈಕೋರ್ಟ್ ನ್ಯಾಯವಾದಿಗಳ ಸಂಘ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ.
- ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 618ಜಲ ಮೂಲಗಳನ್ನು ಪುನಃಶ್ಚೇತನಗೊಳಿಸುವ, 442ಕಾಮಗಾರಿಗಳಿಗೆ ಜಿಲ್ಲಾ ಪಂಚಾಯ್ತಿ ಚಾಲನೆ ನೀಡಿದೆ. ಜಲ ಮೂಲಗಳ ಪುನಃಶ್ಚೇತನ ಕಾರ್ಯಕ್ರಮದಡಿ, ಕೈಗೊಂಡ ’ಮಿಷನ್ ಸ್ವಚ್ಛ ಹಾವೇರಿ’ ಕುರಿತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್ ಮಾಹಿತಿ ನೀಡಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಿಂದ ಸ್ಫೂರ್ತಿ ಪಡೆದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಮ್ಮಿಕೊಂಡಿರುವ ಪರೀಕ್ಷಾ ಪರ್ವಕ್ಕೆ ಇಂದು ಚಾಲನೆ ನೀಡಲಾಗುತ್ತದೆ. 2022ನೇ ಸಾಲಿನ ಈ ಕಾರ್ಯಕ್ರಮ ಮೇ 31ರ ವರೆಗೆ ನಡೆಯಲಿದ್ದು, ಪರೀಕ್ಷೆಗಳ ಬಗ್ಗೆ ಮಕ್ಕಳಲ್ಲಿರುವ ಒತ್ತಡದ ದೃಷ್ಟಿಕೋನವನ್ನು ಬದಲಾಯಿಸಲು ಮತ್ತು ಮಕ್ಕಳನ್ನು ಪರೀಕ್ಷಾ ಆತಂಕದಿಂದ ಹೊರತರುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
- ಆಸ್ತಿ ತೆರಿಗೆಯನ್ನು ಏಪ್ರಿಲ್ 30ರೊಳಗೆ ಪಾವತಿಸುವವರಿಗೆ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
- ಕಿವುಡ ಮತ್ತು ಮೂಕರ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ಗೆ ಧಾರವಾಡದ ನಿಧಿ ಶಿವರಾಂ ಸುಲಾಖೆ ಆಯ್ಕೆಯಾಗಿದ್ದಾರೆ. ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದಲ್ಲಿ ಬಿ.ಕಾಂ. ಪದವಿ ಓದುತ್ತಿರುವ ನಿಧಿ ಸುಲಾಖೆ, ಬರುವ ಮೇ ತಿಂಗಳು ಒಂದನೇ ತಾರೀಖಿನಿಂದ 15 ರ ವರೆಗೆ ಬ್ರೆಜಿಲ್‌ನಲ್ಲಿ ನಡೆಯಲಿರುವ ’ಡೆಫ್ ಒಲಿಂಪಿಕ್ಸ್’ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಏಕೈಕ ಮಹಿಳೆ. ಮಹಿಳೆಯರ 67ಕೆ.ಜಿ. ತೂಕದವರ ಟೇಕ್ವಾಂಡೊ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.
- ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿಂದು ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ನಡೆಯಲಿರುವ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243