ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ಮಣ್ಣು ಉಳಿಸಿ ಸಂರಕ್ಷಿಸುವ ಕುರಿತು ಇಶಾ ಫೌಂಡೇಶನ್ ಬೆಂಗಳೂರಿನ ಅರಮನೆ ಆವರಣದಲ್ಲಿ ಇಂದು ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಆನಂತರ ಅವರು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
- ಸೂರಿಲ್ಲದವರಿಗೆ ಸೂರು ಕಲ್ಪಿಸಬೇಕೆಂಬ ಉದ್ದೇಶದಿಂದ ಗ್ರಾಮೀಣ ಭಾಗಕ್ಕೆ ಹೋಗಿ ಸಮೀಕ್ಷೆ ಮಾಡಿ ಸೂರಿಲ್ಲದ ಬಡ ಕುಟುಂಬಗಳಿಗೆ ಸ್ಥಳದಲ್ಲಿಯೇ ಕಾರ್ಯಾದೇಶ ನೀಡುವ ಪ್ರಾಯೋಗಿಕ ವಸತಿ ಯೋಜನೆಯನ್ನು ಕಲಬುರಗಿಯಲ್ಲಿಯೂ ಜಾರಿ ಮಾಡಲಾಗುವುದು ಎಂದು ರಾಜ್ಯದ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದ್ದಾರೆ. ಜುಲೈ 31 ರೊಳಗೆ ಸಮೀಕ್ಷೆ ಕಾರ್ಯ ಮುಗಿಸಿ ಆಗಸ್ಟ್ 15 ರೊಳಗೆ ಕೆಲಸ ಪ್ರಾರಂಭಿಸಲಾಗುವುದು ಎಂದು ಕಲಬುರಗಿಯಲ್ಲಿ ಹೇಳಿದ್ದಾರೆ.
- ಯಾದಗಿರಿ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಯ ದೃಷ್ಟಿಯಿಂದ ನರೇಗಾ ಯೋಜನೆ ಅನು?ನ ಮಾಡುವ ಕೃಷಿ, ತೋಟಗಾರಿಕೆ, ಅರಣ್ಯ ಹಾಗೂ ರೇ? ಇಲಾಖೆಗಳು ನರೇಗಾ ಯೋಜನೆಯ ಒಗ್ಗೂಡಿಸುವಿಕೆ ಅಡಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ್ ದಿಡ್ಡಿಮನಿ ಹೇಳಿದ್ದಾರೆ.
- ಕಳೆದ ಏಪ್ರ್ರಿಲ್-ಮೇ ತಿಂಗಳಲ್ಲಿ ಜರುಗಿದ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇಕಡ 61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡ 68.72ಬಾಲಕಿಯರು, ಶೇಕಡ 55.22 ಬಾಲಕರು ಉತ್ತೀರ್ಣಗೊಂಡಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈಸಾಧಿಸಿದ್ದಾರೆ.
- ಕೇಂದ್ರ ಸರಕಾರದಿಂದ ಗ್ರಾಮೀಣ ಅಭಿವೃಧ್ಧಿಗಾಗಿ ಕೋಟ್ಯಾಂತರ ರೂಪಾಯಿಗಳನ್ನು ವಿನಿಯೋಗಿಸಲಾಗುತ್ತಿದೆ. ಒಂದು ಲಕ್ಷಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳಿಗೆ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಿತ್ರದುರ್ಗದಲ್ಲಿ ನಿನ್ನೆ ಹೇಳಿದ್ದಾರೆ.
- ದಕ್ಷಿಣ ಆಫ್ರಿಕಾ ಹಾಗೂ ಭಾರತದ ನಡುವಿನ 5ನೇ ಹಾಗೂ ಅಂತಿಮ ಟ್ವೆಂಟಿ-20ಕ್ರಿಕೆಟ್ ಟೂರ್ನಿಯ ಅಂತಿಮ ಪಂದ್ಯಾವಳಿ ಇಂದು ಸಂಜೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಂಗಣದ ಸುತ್ತಲೂ ವಾಹನಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿದೆ. ಕ್ರೀಡಾಂಗಣಕ್ಕೆ ಬರುವ ಪ್ರೇಕ್ಷಕರ ವಾಹನಗಳನ್ನು ಕಬ್ಬನ್‌ಪಾರ್ಕ್ ಸುತ್ತಮುತ್ತ ನಿಲುಗಡೆಗೆ ಸಂಚಾರಿ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ.
- ಸ್ಥಳೀಯ ಸಮಸ್ಯೆಗಳು, ಸ್ಥಳೀಯವಾಗಿಯೇ ಬಗೆಹರಿಯಬೇಕು ಇದಕ್ಕಾಗಿ ಸ್ಥಳೀಯ ಸಂಸ್ಥೆಗಳು ಹೆಚ್ಚು ಶಕ್ತಿಯತವಾಗಬೇಕು. ಈ ಉದ್ದೇಶಕ್ಕಾಗಿ ಅಮೃತ ಮಹೋತ್ಸವ ಯೋಜನೆಯಡಿ ಪ್ರತೀ ಗ್ರಾಮ ಪಂಚಾಯತಿಗೆ 2 ಕೋಟಿ ರೂಪಾಯಿ ನೀಡಲಾಗಿದೆ ಮತ್ತು ನಗರೋತ್ಥಾನ ಯೋಜನೆ ಅನುಷ್ಠಾನಕ್ಕಾಗಿ 3 ಸಾವಿರದ 885ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗದಲ್ಲಿ ನಿನ್ನೆ ತಿಳಿಸಿದ್ದಾರೆ.
- ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಮಂಗಳವಾರದಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿರುವ ಯೋಗ ಪ್ರದರ್ಶನದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ರಾಜವಂಶಸ್ಥ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಜಿಲ್ಲಾಡಳಿತ ವಿದ್ಯುಕ್ತವಾಗಿ ಆಹ್ವಾನ ನೀಡಿದೆ.
- ಭಾರತೀಯ ಸಂಸ್ಕೃತಿಯು ಸರ್ವಧರ್ಮ ಸಮಭಾವ ಮತ್ತು ವಸುಧೈವ ಕುಟುಂಬಕಂ ಎಂಬ ಮನೋಭಾವದಿಂದ ಪ್ರೇರಿತವಾಗಿದೆ. ವಿಶ್ವಶಾಂತಿ, ಸಮಾನತೆ ಮತ್ತು ಸಹೋದರತ್ವ ಸಾಮರಸ್ಯವನ್ನು ಪ್ರೇರೇಪಿಸುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಪ್ರತಿಪಾದಿಸಿದ್ದಾರೆ.
- ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ, ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ.
- ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್‌ನ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇಕಡ 10ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಗೃಹ ಸಚಿವಾಲಯ ತೀರ್ಮಾನಿಸಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಟ್ವೀಟ್ ಸಂದೇಶದಲ್ಲಿ ತಿಳಿಸಿದೆ. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್‌ನ ನೇಮಕಾತಿಯಲ್ಲಿ ಅಗ್ನಿವೀರರ ನೇಮಕಾತಿಗೆ ನಿಗದಿಪಡಿಸಿರುವ ವಯೋಮಿತಿಯಲ್ಲಿ 3 ವರ್ಷಗಳ ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
- ಅಮರನಾಥ ಯಾತ್ರೆಗೆ ಇನ್ನು ಕೇವಲ 15 ದಿನಗಳಿರುವಂತೆಯೇ ಜಮ್ಮು-ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಯಾತ್ರಾರ್ಥಿಗಳ ಭದ್ರತೆ ಮತ್ತು ಇತರ ವ್ಯವಸ್ಥೆ ಕುರಿತು ಅಧಿಕಾರಿಗಳು ನಿನ್ನೆ ಪರಿಶೀಲಿಸಿದರು. ಯಾತ್ರಾರ್ಥಿಗಳು ಸಾಗುವ ಜಮ್ಮು, ಉದ್ದಾಂಪುರ್ ಮತ್ತು ರಂಬನ್ ಜಿಲ್ಲೆಗಳಲ್ಲಿನ ಭದ್ರತಾ ವ್ಯವಸ್ಥೆ ಸೇರಿದಂತೆ ಇತರ ಸೌಲಭ್ಯಗಳ ಕುರಿತು ಹಿರಿಯ ಅಧಿಕಾರಿಗಳು ಪೊಲೀಸರ ಜತೆಗೂಡಿ ಪರಿಶೀಲನಾ ಕಾರ್ಯ ನಡೆಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243